ನಾಲ್ಕು ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಿದ ಬಿಜೆಪಿ: ಕರ್ನಾಟಕದಲ್ಲಿ ಯಾವಾಗ?
Team Udayavani, Jul 4, 2023, 3:33 PM IST
ಹೊಸದಿಲ್ಲಿ: ಭಾರತೀಯ ಜನತಾ ಪಕ್ಷವು ನಾಲ್ಕು ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆಯಾಗಿದೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.
ತೆಲಂಗಾಣ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಇಟಾಲ ರಾಜೇಂದರ್ ಅವರನ್ನು ನೇಮಕ ಮಾಡಲಾಗಿದೆ.
2024ರ ಲೋಕಸಭಾ ಚುನಾವಣೆ, ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಯಾವಾಗ?
ಕರ್ನಾಟಕ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಈಗಾಗಲೇ ಮುಗಿದಿದೆ. ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ರಾಜ್ಯಕ್ಕೆ ನೂತನ ಅಧ್ಯಕ್ಷರ ಆಯ್ಕೆಯಾಗಬೇಕಿದೆ. ಈಗಾಗಲೇ ಸೋಮಣ್ಣ ಸೇರಿ ಹಲವರು ಅಧ್ಯಕ್ಷ ಪಟ್ಟಕ್ಕೆ ಉತ್ಸುಕತೆ ತೋರಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಇದುವರೆಗೆ ಯಾರನ್ನೂ ಅಂತಿಮಗೊಳಿಸಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ.
ಕರ್ನಾಟಕ ವಿಧಾನಸಭೆ ಅಧಿವೇಶನ ಆರಂಭವಾದರೂ ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಪಕ್ಷದ ವೀಕ್ಷಕರು ಬೆಂಗಳೂರಿಗೆ ಬಂದು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮೊದಲು ವಿಪಕ್ಷ ನಾಯಕನ ನೇಮಕವಾಗಿ ಬಳಿಕ ರಾಜ್ಯಾಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.