Delhi ಸರೋವರಗಳ ನಗರ ; ಆಪ್ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ

2017ರಲ್ಲಿ ಲಂಡನ್‌... 2019 ರಲ್ಲಿ ಪ್ಯಾರಿಸ್‌...!

Team Udayavani, Jul 15, 2023, 6:40 PM IST

1-sadsada

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಪ್ರವಾಹದಲ್ಲಿ ಮುಳುಗಿ ಸಂಕಷ್ಟಕ್ಕೆ ಸಿಲುಕಿರುವ ವೇಳೆ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಪರಸ್ಪರ ಕೆಸರೆರಚಿಕೊಳ್ಳುತ್ತಿವೆ. 2017ರಲ್ಲಿ ದೆಹಲಿಯನ್ನು ಲಂಡನ್‌ನಂತೆ ಮಾಡುತ್ತೇವೆ, 2019 ರಲ್ಲಿ ಪ್ಯಾರಿಸ್‌ನಂತೆ ಮಾಡುತ್ತೇವೆ ಎಂದಿದ್ದ ಆಮ್ ಆದ್ಮಿ ಪಕ್ಷ 2023ರಲ್ಲಿ ಸರೋವರಗಳ ನಗರವನ್ನಾಗಿ ಮಾಡಿದೆ ಎಂದು ಬಿಜೆಪಿ ಪ್ರವಾಹ ಪರಿಸ್ಥಿತಿಯ ಕುರಿತು ಆಮ್ ಆದ್ಮಿ ಪಕ್ಷದ ವಿರುದ್ಧ ಶನಿವಾರ ಆಕ್ರೋಶ ಹೊರ ಹಾಕಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಮತ್ತು ಪಕ್ಷದ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಕೇಜ್ರಿವಾಲ್ ಸರಕಾರ ಕಳೆದ ಎಂಟು ವರ್ಷಗಳಲ್ಲಿ ಯಮುನಾ ನದಿಯ ಹೂಳು ತೆಗೆಯದ ಕಾರಣದಿಂದ ಪ್ರವಾಹ ಉಂಟಾಗಿದೆ ಎಂದು ಆರೋಪಿಸಿದರು.

“ಆಪ್ ಮತ್ತು ಕೇಜ್ರಿವಾಲ್ ಅವರು ಭ್ರಷ್ಟಾಚಾರ ಮತ್ತು ನಿಷ್ಕ್ರಿಯತೆಯಲ್ಲಿ ದೊಡ್ಡವರು. ಕೋವಿಡ್ -19 ಸಮಯದಲ್ಲಿ ಮತ್ತು ಮಾಲಿನ್ಯದ ಸಮಯದಲ್ಲಿ ಅವರು ಕೇಂದ್ರ ಮತ್ತು ಇತರ ರಾಜ್ಯಗಳನ್ನು ದೂಷಿಸಿದಂತೆಯೇ, ಈಗ ದೆಹಲಿಯ ಪ್ರವಾಹಕ್ಕೆ ಹರಿಯಾಣವನ್ನು ಆರೋಪಿಸುತ್ತಿದ್ದಾರೆ”ಎಂದು ಭಾಟಿಯಾ ಕಿಡಿ ಕಾರಿದರು.

ಕೇಂದ್ರ ಸರಕಾರ, ಸೇನೆ, ಎನ್‌ಡಿಆರ್‌ಎಫ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಇತರ ಏಜೆನ್ಸಿಗಳು ಜನರಿಗೆ ಪರಿಹಾರ ನೀಡಲು ಶ್ರಮಿಸುತ್ತಿರುವಾಗ, ಎಎಪಿ ಮತ್ತು ಕೇಜ್ರಿವಾಲ್ ಸರ್ಕಾರದ ಮಂತ್ರಿಗಳು ನಗರವನ್ನು ಪ್ರವಾಹ ಪೀಡಿತ ಮಾಡಲು “ಪಿತೂರಿ” ನಡೆದಿದೆ ಎಂದು ಆರೋಪಿಸುತ್ತಿರುವುದು ಕೀಳು ಮನಸ್ಥಿತಿ ಎಂದರು.

”ಸುಳ್ಳು ಭರವಸೆಗಳನ್ನು ಏಣಿಯಾಗಿ ಬಳಸಿಕೊಂಡು ಕೇಜ್ರಿವಾಲ್ ತನ್ನನ್ನು ಶ್ರೀಮಂತನನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ದೆಹಲಿಯ ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ದೆಹಲಿ ಮುಳುಗಿದೆ ಆದರೆ ಕೇಜ್ರಿವಾಲ್ ತನ್ನ ‘ಶೀಷ್ಮಹಲ್’ ನಲ್ಲಿ ತನ್ನ ದುರಾಡಳಿತಕ್ಕಾಗಿ ಇತರರನ್ನು ದೂಷಿಸುವುದರಲ್ಲಿ ನಿರತರಾಗಿದ್ದಾರೆ.ಸಾರ್ವಜನಿಕರು ಅದನ್ನು ಖಂಡಿತವಾಗಿ ಲೆಕ್ಕ ಹಾಕುತ್ತಾರೆ” ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ಹರಿಯಾಣ ಸರಕಾರವು ಉದ್ದೇಶಪೂರ್ವಕವಾಗಿ ರಾಷ್ಟ್ರ ರಾಜಧಾನಿ ಕಡೆಗೆ ನೀರು ಬಿಡುವುದರಿಂದ ನಗರದಲ್ಲಿ ಪ್ರವಾಹ ಉಂಟಾಗಿದೆ ಎಂದು ದೆಹಲಿ ಸಂಪುಟ ಸಚಿವ ಸೌರಭ್ ಭಾರದ್ವಾಜ್ ಶನಿವಾರ ಆರೋಪಿಸಿದ್ದರು.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.