ಮ.ಪ್ರ.ದಲ್ಲಿ ಕೈ-ಕಮಲ ಸೈಬರ್ ಕದನ
Team Udayavani, Jun 18, 2018, 12:15 PM IST
ಭೋಪಾಲ್: ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಸಜ್ಜಾಗಿದ್ದು, ಸೈಬರ್ ಯುದ್ಧ ಶುರು ಮಾಡಿವೆ.
ಆಡಳಿತರೂಢ ಬಿಜೆಪಿಯ ಐಟಿ ಸೆಲ್‌ನಲ್ಲಿ 65,000 ಸೈಬರ್ ಯೋಧರನ್ನು ಕಾರ್ಯಾಚರಣೆಗೆ ಬಿಡಲಾಗಿದೆ. ಇದೇ ವೇಳೆ ಕಾಂಗ್ರೆಸ್ “ರಾಜೀವ್ ಕಿ ಸಿಪಾಹಿ’ ಹೆಸರಲ್ಲಿ ಐಟಿ ಸೆಲ್ ಸ್ಥಾಪಿಸಿದೆ. ಅದರಲ್ಲಿ 4,000 ಮಂದಿಯ ತಂಡ ಕಾರ್ಯಾಚರಿಸತೊಡಗಿದೆ. ಜನಪ್ರಿಯ ಸಾಮಾಜಿಕ ಜಾಲತಾಣಗಳಾಗಿರುವ ಫೇಸ್‌ಬುಕ್, ಟ್ವಿಟರ್ ಹಾಗೂ ವಾಟ್ಸಪ್‌ಗ್ಳ ಮೂಲಕ ಎರಡೂ ಪಕ್ಷಗಳು ಯುವ ಮತದಾರರನ್ನು ಸೆಳೆಯಲು ಯೋಜಿಸಿವೆ. ಇನ್ನೂ 5,000 ಮಂದಿ ಶೀಘ್ರದಲ್ಲೇ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಐಟಿ ಸೆಲ್ ಮುಖ್ಯಸ್ಥ ಶಿವರಾಜ್ ಸಿಂಗ್ ದಬಿ ಹೇಳಿದ್ದಾರೆ.
ಕಾಂಗ್ರೆಸ್ ಜೊತೆ ಬಿಎಸ್‌ಪಿ ಮೈತ್ರಿಯಿಲ್ಲ
ಮಧ್ಯಪ್ರದೇಶ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್‌ಪಿ 230 ಕ್ಷೇತ್ರಗಳ ಪೈಕಿ 55-60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ ನರ್ಮದಾ ಪ್ರಸಾದ್ ಅಹಿರ್ವಾರ್ ಹೇಳಿದ್ದಾರೆ. ಇನ್ನು ಸಮಾಜವಾದಿ ಪಕ್ಷ ಮಧ್ಯಪ್ರದೇಶದಲ್ಲಿ ಅಸ್ತಿತ್ವವನ್ನೇ ಹೊಂದಿಲ್ಲದಿರುವುದರಿಂದ ಅದರ ಜತೆಗೆ ಮೈತ್ರಿ ಅರ್ಥಹೀನ ಎಂದು ಹೇಳಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ ನರ್ಮದಾ ಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.