LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ
Team Udayavani, Jul 7, 2024, 7:36 PM IST
ತ್ರಿಶೂರ್(ಕೇರಳ): ಕೇಂದ್ರ ಸಚಿವ, ಬಿಜೆಪಿ ಸಂಸದ ಸುರೇಶ್ ಗೋಪಿ ಅವರನ್ನು ಹೊಗಳಿ ಸಂಕಷ್ಟಕ್ಕೆ ಸಿಲುಕಿರುವ ತ್ರಿಶೂರ್ ಕಾರ್ಪೊರೇಷನ್ ಮೇಯರ್ ಎಂ.ಕೆ. ವರ್ಗೀಸ್ ಅವರ ಪರ ಕೇರಳ ಬಿಜೆಪಿ ನಿಂತಿದ್ದು, ರಾಜಕೀಯವನ್ನು ಲೆಕ್ಕಿಸದೆ ಅಭಿವೃದ್ಧಿಗಾಗಿ ಶ್ರಮಿಸುವ ಯಾರಿಗಾದರೂ ಪಕ್ಷ ಬೆಂಬಲ ನೀಡಲಿದೆ ಎಂದು ಹೇಳಿದೆ.
ಕೇಂದ್ರ ಸಚಿವರಾಗಿ ಗೋಪಿ ಅವರು ತ್ರಿಶೂರ್‌ನ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ವಾಸ್ತವ ವಿಚಾರ. ಸತ್ಯ ಹೇಳಿದ್ದಕ್ಕಾಗಿ ಮೇಯರ್‌ರನ್ನು ಏಕೆ ಗುರಿಮಾಡಲಾಗುತ್ತಿದೆ. ರಾಜಕೀಯ ವಿರೋಧಿಗಳು ಎಲ್ಲದರಲ್ಲೂ ರಾಜಕೀಯ ಬೆರೆಸುತ್ತಿದ್ದಾರೆ. ಅವರಿಗೆ ಬೇರೆ ಕೆಲವು ಹಿಡನ್ ಅಜೆಂಡಾ ಇದೆ. ಮೇಯರ್ ವಿರುದ್ಧ ಕೆಲವು ಸಮಸ್ಯೆಗಳನ್ನು ಹೊಂದಿರಬಹುದು. ಆ ಆರೋಪವನ್ನು ಸುರೇಶ್ ಗೋಪಿಯವರ ಮೇಲೆ ಹಾಕುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ.ರಮೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (LDF)-ಆಡಳಿತ ನಡೆಸುತ್ತಿರುವ ತ್ರಿಶೂರ್ ಕಾರ್ಪೊರೇಷನ್‌ನ ಮೇಯರ್ ವರ್ಗೀಸ್ ಅವರು ಸುರೇಶ್ ಗೋಪಿ ಅವರಿ ಗೆ ತ್ರಿಶೂರ್ ಕ್ಷೇತ್ರ ಮತ್ತು ಕೇರಳದ ಅಭಿವೃದ್ಧಿಗೆ ದೂರದೃಷ್ಟಿ ಇದೆ. ಸಂಸದರು ಅಥವಾ ಸಚಿವರ ಅಭಿವೃದ್ಧಿಗೆ ರಾಜಕೀಯದ ಹೊರತಾಗಿ ಜತೆಯಾಗಿ ನಿಲ್ಲುವುದು ಜನಪ್ರತಿನಿಧಿಯಾಗಿ ನನ್ನ ಜವಾಬ್ದಾರಿ ಎಂದಿದ್ದರು.
ಬಿಜೆಪಿ ಸೇರುತ್ತೀರಾ ಎಂದು ಸುದ್ದಿಗಾರರು ಕೇಳಿದಾಗ ಅವರು ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ಏಪ್ರಿಲ್ 26 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಸುರೇಶ್ ಗೋಪಿ ಅವರನ್ನು ಬೆಂಬಲಿಸಿದ ಆರೋಪದ ಮೇಲೆ ವರ್ಗೀಸ್ ಈ ಹಿಂದೆ ಎಡಪಕ್ಷಗಳ ಕಾರ್ಯಕರ್ತರಿಂದ ಹಲ್ಲೆಗೂ ಒಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.