ರಾಹುಲ್‌ಗೆ ಬಿಜೆಪಿ ಆಹ್ವಾನ
Team Udayavani, Jan 30, 2019, 12:30 AM IST
ಪಣಜಿ: “ರಾಹುಲ್ ಅವರೇ, “ಅಟಲ್ ಸೇತು’ವನ್ನು ಒಮ್ಮೆ ನೋಡಬನ್ನಿ. ಆಗ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ಹೇಗೆ ಭಾರತವನ್ನು ಬದಲಾಯಿಸುತ್ತಿದೆ ಎಂಬುದು ನಿಮಗೆ ತಿಳಿಯುತ್ತದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ಟ್ವಿಟರ್ ಮೂಲಕ ಆಹ್ವಾನ ನೀಡಿದೆ. ಖಾಸಗಿ ಭೇಟಿ ನಿಮಿತ್ತ ತಾಯಿ ಸೋನಿಯಾ ಗಾಂಧಿ ಜತೆಗೆ ಗೋವಾಗೆ ಬಂದ ರಾಹುಲ್‌ಗೆ ಈ ಮೂಲಕ ಆಹ್ವಾನ ನೀಡಲಾಗಿದೆ.
ಮಾಂಡೋವಿ ನದಿಗೆ ಅಡ್ಡವಾಗಿ ಕಟ್ಟಿರುವ 5.1 ಕಿ.ಮೀ. ಉದ್ದದ ಕೇಬಲ್ ಸೇತುವೆಯ ಉದ್ಘಾಟನೆ ಭಾನುವಾರ ನೆರವೇರಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ಇನ್ನು ಸೇತುವೆ ಉದ್ಘಾಟನೆ ವೇಳೆ, ಉರಿ ಚಿತ್ರದ ಖ್ಯಾತ ಸಂಭಾಷಣೆ “ಹೌ ಈಸ್ ದ ಜೋಷ್’ ಎಂದು ಕೇಳಿದ್ದ ಪಾರೀಕರ್ ವಿರುದ್ಧ ಟ್ವಿಟರ್‌ನಲ್ಲಿ ಕಿಡಿಕಾರಿರುವ ಗೋವಾ ಕಾಂಗ್ರೆಸ್, “ಮೊದಲು ನೀವು ಹೋಶ್‌ಗೆ (ಪ್ರಜ್ಞಾವಸ್ಥೆಗೆ) ಬನ್ನಿ. ಆನಂತರ ಜೋಷ್ ಬಗ್ಗೆ (ಉತ್ಸಾಹ) ಮಾತನಾಡಿ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದ್ದು, ಸಾಲದ ಮೊತ್ತ ಏರುತ್ತಲೇ ಇದೆ. ಇನ್ನು, ಜನರಲ್ಲಿ ಉತ್ಸಾಹ ಹೇಗೆ ತಾನೇ ಬಂದೀತು” ಎಂದಿದೆ.
ಆಡಿಯೋ ಟೇಪ್ ತಿರುಚಿದ್ದಲ್ಲ: ರಾಹುಲ್
“ರಫೇಲ್ ಒಪ್ಪಂದಕ್ಕೆ ಸಂಬಂಧಪಟ್ಟ ಕೆಲ ಮಹತ್ವದ ಕಡತಗಳ ಬಗ್ಗೆ ಬಹಿರಂಗಗೊಂಡಿದ್ದ ಆಡಿಯೋ ಕ್ಲಿಪ್‌ನಲ್ಲಿರುವ ಧ್ವನಿ ಗೋವಾ ಸಚಿವ ವಿಶ್ವಜಿತ್ ರಾಣೆ ಅವರದ್ದೇ ಆಗಿದ್ದು, ಇದು ಗೋವಾ ಮುಖ್ಯಮಂತ್ರಿ ಪಾರೀಕರ್ ಅವರು ಪ್ರಧಾನಿ ನರೇಂದ್ರ ಮೋದಿ ಮೇಲೆ ಹಿಡಿತ ಸಾಧಿಸಿರುವುದನ್ನು ಸಾಬೀತುಪಡಿಸುತ್ತದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜತೆಗೆ, “ಆಡಿಯೋ ಕ್ಲಿಪ್ ಬಹಿರಂಗವಾಗಿ 30 ದಿನ ಕಳೆದಿದ್ದರೂ ಈವರೆಗೆ ಯಾರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿಲ್ಲ’ ಎಂದಿದ್ದಾರೆ. ಇತ್ತೀಚೆಗೆ, ಅಜ್ಞಾತ ವ್ಯಕ್ತಿಯೊಂದಿಗಿನ ಫೋನ್ ಸಂಭಾಷಣೆಯಲ್ಲಿ ಗೋವಾದ ಸಚಿವ ವಿಶ್ವಜಿತ್ ರಾಣೆ ಅವರು, ರಫೇಲ್ ಒಪ್ಪಂದ ಕುರಿತ ಕೆಲ ಮಹತ್ವದ ಕಡತಗಳು ತಮ್ಮ ಭದ್ರತೆಯಲ್ಲಿ ಇರುವುದಾಗಿ ಪಾರೀಕರ್ ತಿಳಿಸಿರುವುದಾಗಿ ಹೇಳಿದ್ದರು. ಈ ಆಡಿಯೋ ಕ್ಲಿಪ್ ಬಹಿರಂಗವಾಗುತ್ತಲೇ ಈ ಧ್ವನಿ ತಮ್ಮದಲ್ಲ ಎಂದು ರಾಣೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.