ಬಿಜೆಪಿ ದೇಶದ ಜನತೆಯ ದಾರಿ ತಪ್ಪಿಸುತ್ತಿದೆ, ಭರವಸೆ ಈಡೇರಿಸಿಲ್ಲ : ದಿನೇಶ್ ಗುಂಡೂರಾವ್
ಸರ್ಕಾರದ ಎಲ್ಲ ಕೃತ್ಯಗಳನ್ನು ಜನತೆಯ ಮುದಿಡಲಾಗುವುದು
Team Udayavani, Jun 3, 2022, 2:04 PM IST
ಪಣಜಿ: ಕಳೆದ 8 ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಜನತೆಯನ್ನು ದಾರಿ ತಪ್ಪಿಸುತ್ತಿರುವ ಕುರಿತಂತೆ ಚರ್ಚೆ ನಡೆಸಿ ಇದನ್ನು ದೇಶದ ಜನತೆಗೆ ತಲುಪಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉದಯಪುರದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯ ಧ್ಯಾನ ಶಿಬಿರದ ನಂತರ ಗೋವಾದಲ್ಲಿ ಕಾಂಗ್ರೆಸ್ ಪಕ್ಷದ ಎರಡು ದಿನಗಳ ನವಸಂಕಲ್ಪ ಶಿಬಿರ ಆರಂಭಗೊಂಡಿದ್ದು, ಪಣಜಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎಂಟು ವರ್ಷಗಳಲ್ಲಿ ಜನತೆಗೆ ನೀಡಿದ ಭರವಸೆ ಈಡೇರಿಸಲು ಸರ್ಕರದಿಂದ ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರವು ನಾನಾ ಯೋಜನೆಗಳ ಆಮಿಷವೊಡ್ಡಿ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ಬಿಜೆಪಿ ಸರ್ಕಾರದ ಈ ಎಲ್ಲ ಕೃತ್ಯವನ್ನು ಜನತೆಯ ಮುದಿಡಲಾಗುವುದು ಎಂದು ಹೇಳಿದರು.
ಇನ್ನು ಕೆಲವೇ ದಿನಗಳಲ್ಲಿ ಬಿಜೆಪಿ ಶಾಸಕರ ಸಂಖ್ಯೆ 30 ಕ್ಕೆ ಏರಿಕೆಯಾಗಲಿದೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ ರವಿ ನೀಡಿರುವ ಹೇಳಿಕೆಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿ, ಇದರಲ್ಲಿ ಯಾವುದೇ ಸತ್ಯವಿಲ್ಲ. ಇಂತಹ ಹೇಳಿಕೆಗಳು ರಾಜಕೀಯದಲ್ಲಿ ಬರುತ್ತಿರುತ್ತದೆ. ಕಾಂಗ್ರೆಸ್ ಶಾಸಕರ ಮೇಲೆ ನನಗೆ ವಿಶ್ವಾಸವಿದೆ, ನಮ್ಮ ಶಾಸಕರು ನಮ್ಮ ಪಕ್ಷ ಬಿಟ್ಟು ಹೋಗುವುದಿಲ್ಲ. ಅವರ ಹೇಳಿಕೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸುವುದಿಲ್ಲ. ಇಂದಿನ ನವಸಂಕಲ್ಪ ಶಿಭಿರದಲ್ಲಿ ಒಂದೆರಡು ಶಾಸಕರನ್ನು ಹೊರತುಪಡಿಸಿ ಉಳಿದೆಲ್ಲ ಶಾಸಕರೂ ಭಾಗಿಯಾಗಿದ್ದಾರೆ, ಪಕ್ಷಕ್ಕೆ ಬದ್ಧತೆ ತೋರಿಸಿದ್ದಾರೆ ಎಂದರು.
ಗೋವಾದಲ್ಲಿ ನಿಗದಿತ ಸಮಯಕ್ಕೆ ಪಂಚಾಯತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಇಷ್ಟವಿಲ್ಲ. ಇದರಿಂದಾಗಿ ಒಬಿಸಿ ಸರ್ವೆ ಕಾರಣವನ್ನು ಮುಂದಿಟ್ಟುಕೊಂಡು ಈ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸಲಾಗುತ್ತಿದೆ. ರಾಜ್ಯ ಚುನಾವಣಾ ಆಯೋಗ ಆದಷ್ಟು ಬೇಗ ಗೋವಾದಲ್ಲಿ ಪಂಚಾಯತ್ ಚುನಾವಣೆ ನಡೆಸಲು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ. ಪ್ರಸಕ್ತ ಗೋವಾ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ವಿರುದ್ಧದ ಹಲವು ಪ್ರಸ್ತಾಪಗಳಿವೆ, ಇದನ್ನು ಚರ್ಚೆಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರತಿಪಕ್ಷದ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿಯು “ಇಡಿ”ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.