Panaji: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನ ಪಡೆಯುವುದು ಖಚಿತ
Team Udayavani, Feb 11, 2024, 2:32 PM IST
ಪಣಜಿ: ಭಾರತದಲ್ಲಿ 10 ವರ್ಷಗಳ ಕೆಟ್ಟ ಆಡಳಿತದ ನಂತರ ನಮ್ಮ ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿಯರನ್ನು ಅಧಿಕಾರಕ್ಕೆ ತಂದರು. ಅಂದು ಇಡೀ ಜಗತ್ತಿನಲ್ಲಿರುವ ಕನ್ನಡಿಗರು ಭಾರತದಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಪ್ರಚಾರಕ್ಕೆ ಬಂದಿದ್ದರು. 213 ಸ್ಥಾನ ಪಡೆದು ಪೂರ್ಣ ಬಹುಮತದಲ್ಲಿ ಅಂದು ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದರು ಎಂದು ಯುವಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಗೋವಾ ರಾಜಧಾನಿ ಪಣಜಿಯ ಮೆನೆಜಿಸ್ ಬ್ರಗಾಂಜಾ ಸಭಾಗೃಹದಲ್ಲಿ ಫೆ.11ರ ಭಾನುವಾರ ಗೋವಾ ಬಿಜೆಪಿ ಕರ್ನಾಟಕ ಘಟಕ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಉಪಸ್ಥಿತರಿದ್ದು, ಉಪನ್ಯಾಸ ನೀಡಿದರು.
ಗೋಮಂತಕವನ್ನು ಗಟ್ಟಿಯಾಗಿಸಲು ಗೋವಾದಲ್ಲಿ ಕನ್ನಡಿಗರು ಒಗ್ಗಟ್ಟಾಗಬೇಕು. ಭಾರತದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗದಿದ್ದರೆ ಕಳೆದ 10 ವರ್ಷಗಳಲ್ಲಿ ಮೋದಿ ನಮ್ಮ ದೇಶವನ್ನು ಮೇಲೆ ತಂದಿರುವುದನ್ನು ಮುಂದೆ ಬೇರೆ ಸರ್ಕಾರ ಅಧಿಕಾರಕ್ಕೆ ಬಂದರೆ ಆ ಸರ್ಕಾರ ನಮ್ಮ ದೇಶವನ್ನು ಪ್ರಪಾತಕ್ಕೆ ತಳ್ಳುತ್ತದೆ. ಅದಕ್ಕಾಗಿ ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿಯಾಗಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಎಂದರು.
ಹೂಡಿಕೆ ಮಾಡಲು ಇಂದು ಜಗತ್ತು ನಮ್ಮ ಮೇಲೆ ವಿಶ್ವಾಸವಿಡುತ್ತಿದೆ. ಹೂಡಿಕೆ ಮಾಡಲು ಚೀನಾ ಮತ್ತು ಭಾರತ ಈ ಎರಡೂ ದೇಶಗಳಲ್ಲಿ ಭಾರತವನ್ನು ಹೂಡಿಕೆದಾರರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಸಕ್ತ ಬಾರಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನ ಪಡೆಯುವುದು ಖಚಿತ. ಆದರೆ ಕಾಂಗ್ರೆಸ್ ಪಕ್ಷವನ್ನು 40 ಸ್ಥಾನಗಳಿಗಿಂತ ಕೆಳಕ್ಕಿಳಿಸುವುದು ಹೇಗೆ ಎಂಬುದು ಮುಖ್ಯವಾಗಿದೆ ಎಂದ ಅವರು ಕರ್ನಾಟಕದಲ್ಲಿ ಕಳೆದ 8 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಕೂಡ ನಡೆದಿಲ್ಲ. ಕರ್ನಾಟಕದಲ್ಲಿ ಇಎಸ್‍ಐ ಆಸ್ಪತ್ರೆಗಳಲ್ಲಿ ಔಷಧಿ ಪೂರೈಸಲು ಸರ್ಕಾರದ ಬಳಿ ಹಣವಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು.
ನಾನು ಬಿಜೆಪಿಯಿಂದ ಅಥವಾ ಯಾರಿಂದಲೂ ಪ್ರಚಾರಕ್ಕಾಗಿ ಒಂದು ರೂಪಾಯಿಯನ್ನೂ ಪಡೆದುಕೊಂಡಿಲ್ಲ. ಯಾವುದೇ ಹಣಕ್ಕಾಗಿ ನಾನು ಪ್ರಚಾರ ಮಾಡುವುದಿಲ್ಲ. ನಾವು ಇಂದು ಯಾವುದೇ ದೇಶದಲ್ಲಿ ಸಿಲುಕಿಕೊಂಡರೆ ನಮ್ಮನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಇದ್ದಾರೆ ಎಂಬ ವಿಶ್ವಾಸ ಇಂದು ನಮಗಿದೆ. ಇಂದು ನರೇಂದ್ರ ಮೋದಿಯವರ ಜಾಗದಲ್ಲಿ ಬೇರೆ ಯಾರೇ ಇದ್ದರೂ ಕೂಡ ರಾಮಮಂದಿರ ನಿರ್ಮಾಣ ಸಾಧ್ಯವಿರಲಿಲ್ಲ ಎಂದು ಹೇಳಿದರು.
ಕಳೆದ ಅನೇಕ ವರ್ಷಗಳ ಭಾರತ ದೇಶದ ಜನತೆಯ ಕಣ್ಣೀರಿನ ಫಲವಾಗಿ ನಮಗೆ ನರೇಂದ್ರ ಮೋದಿಯವರಂತಹ ಪ್ರಧಾನಿಗಳು ಸಿಕ್ಕಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಭಾರತದಲ್ಲಿ 4 ಕೋಟಿ ಜನರಿಗೆ ಶ್ರೀರಾಮ ಮನೆ ಕಟ್ಟಿಸಿಕೊಟ್ಟ ನಂತರವೇ ಶ್ರೀರಾಮಮಂದಿರಲ್ಲಿ ಶ್ರೀರಾಮ ಕುಳಿತು ನೋಡಿದ್ದಾನೆ ಎಂದರು.
ಈ ಸಂದರ್ಣದಲ್ಲಿ ಗೋವಾ ಬಿಜೆಪಿ ಕರ್ನಾಟಕ ಸೆಲ್ ಕನ್ವೀನರ್ ಮುರಳಿ ಮೋಹನ್ ಶೆಟ್ಟಿ, ದಕ್ಷೀಣ ಗೋವಾ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ಗಿರಿರಾಜ್ ಭಂಡಾರಕಾರ್, ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ, ಮಡಿವಾಳಯ್ಯ ಗಣಾಚಾರಿ, ಶಿವಾನಂದ ಬಿಂಗಿ, ಮತ್ತಿತರರು ಉಪಸ್ಥಿತರಿದ್ದರು. ಗೋವಾದ ವಿವಿಧ ಕನ್ನಡ ಸಂಘಟನೆಗಳ ವತಿಯಿಂದ ಚಕ್ರವರ್ತಿ ಸೂಲಿಬೆಲೆ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.