ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್ ನಿಧನ
ಜೂ.11ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಾಯಕ
Team Udayavani, Jul 22, 2020, 6:05 AM IST
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಂಗಳವಾರ ಲಕ್ನೋದಲ್ಲಿ ಲಾಲ್‌ಜಿ ಟಂಡನ್‌ಗೆ ಅಂತಿಮ ನಮನ ಸಲ್ಲಿಸಿದರು.
ಲಕ್ನೋ: ಮಧ್ಯ ಪ್ರದೇಶ ರಾಜ್ಯಪಾಲ, ಬಿಜೆಪಿ ಹಿರಿಯ ನಾಯಕ ಲಾಲ್‌ಜಿ ಟಂಡನ್ (85) ನಿಧನ ಹೊಂದಿದರು.
ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆ ಗಳಿಂದ ಬಳಲುತ್ತಿದ್ದ ಅವರು ಜೂನ್ 11ರಂದು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ 5.35ಕ್ಕೆ ನಿಧನ ಹೊಂದಿದರು.
ಬಿಹಾರದಲ್ಲಿ 2018ರ ಆಗಸ್ಟ್‌ನಿಂದ 2019ರ ಜುಲೈವರೆಗೆ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿ ದ್ದರು. ಬಳಿಕ 2019ರಲ್ಲಿ ಮಧ್ಯಪ್ರದೇಶ ರಾಜ್ಯಪಾಲರಾದರು.
ಉತ್ತರ ಪ್ರದೇಶದಲ್ಲಿ 1999-2003ರ ಅವಧಿಯಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು ಅವರ ಪುತ್ರ ಅಶುತೋಷ್ ಟಂಡನ್ ಪ್ರಸ್ತುತ ಉತ್ತರ ಪ್ರದೇಶದಲ್ಲಿ ಸಚಿವರಾಗಿದ್ದಾರೆ. ಲಾಲ್‌ಜಿ ಟಂಡನ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಕಾರಣ ಉತ್ತರಪ್ರದೇಶ ರಾಜ್ಯ ಪಾಲರಾಗಿರುವ ಆನಂದಿ ಬೆನ್ ಪಟೇಲ್ ಮಧ್ಯಪ್ರದೇಶ ಗವರ್ನರ್ ಆಗಿ ಹೆಚ್ಚುವರಿ ಹೊಣೆ ಹೊತ್ತಿದ್ದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಾರ್ಗದರ್ಶನದಲ್ಲಿ ರಾಜಕೀಯ ಏಳಿಗೆ ಕಂಡಿದ್ದ ಟಂಡನ್ 2009ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿದ್ದರು. ಆರ್‌ಎಸ್‌ಎಸ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಅವರು ಮೃದು ಹಿಂದುತ್ವ ಧೋರಣೆ ಹೊಂದಿದ್ದರು. ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು. ಎಲ್ಲ ಪಕ್ಷಗಳ ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ಬಿಎಸ್ಪಿ ನೇತಾರೆ ಮಾಯಾವತಿ ಅವರು ಪ್ರತೀವರ್ಷ ಟಂಡನ್‌ಗೆ ರಾಖೀ ಕಟ್ಟುತ್ತಿದ್ದರು. 1970ರಲ್ಲಿ ಕಾರ್ಪೊರೇಟರ್ ಆಗಿ ರಾಜಕೀಯ ಜೀವನ ಆರಂಭಿಸಿದ್ದರು. ಲಕ್ನೋದಲ್ಲಿ ಟಂಡನ್ ಅಂತ್ಯ ಕ್ರಿಯೆ ನೆರವೇರಿತು.
ಮೋದಿ ಸಂತಾಪ: ಟಂಡನ್ ನಿಧನಕ್ಕೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಮಾಜಮುಖಿ ಕಾರ್ಯಗಳ ಮೂಲಕ ಶ್ರೀ ಲಾಲ್‌ಜಿ ಟಂಡನ್ ನೆನಪಿನಲ್ಲಿ ಉಳಿಯುತ್ತಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಘಟಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
ಅತ್ಯುತ್ತಮ ಆಡಳಿತಗಾರರಾಗಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಸಿಎಂ ಮಾಯಾವತಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.