BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
ಘಟನೆಯ ವಿಡಿಯೋ ಚಿತ್ರೀಕರಿಸಿ ಹಣ ವಸೂಲಿ... !!!, ಪತಿಯನ್ನು ಕೊ*ಲ್ಲುವುದಾಗಿ ಬೆದರಿಕೆ
Team Udayavani, Jan 15, 2025, 9:18 AM IST
ಸಿಧಿ : ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬಿಜೆಪಿ ಮುಖಂಡನನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿಸಿದ ಕೂಡಲೇ ಬಿಜೆಪಿ ಪಕ್ಷದಿಂದ ಹೊರಹಾಕಿದೆ.
ಬಿಜೆಪಿ ನಾಯಕಿಯೂ ಆಗಿರುವ ಸಂತ್ರಸ್ತೆಯ ಮೇಲೆ ಪಕ್ಷದ ಟಿಕೆಟ್ ನೀಡುವ ನೆಪದಲ್ಲಿ ಅತ್ಯಾಚಾ*ರ ಎಸಗಲಾಗಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಆರೋಪಿಗಳು ಘಟನೆಯ ವಿಡಿಯೋ ಚಿತ್ರೀಕರಿಸಿ ಹಣ ವಸೂಲಿಗೆ ಬಳಸುತ್ತಿದ್ದರು ಎನ್ನಲಾಗಿದೆ.
ಆರೋಪಿ ಅಜಿತ್‌ಪಾಲ್ ಸಿಂಗ್ ಚೌಹಾಣ್ ಮಹಿಳೆಯ ಪತಿಯನ್ನು ಕೊ*ಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಅಶ್ಲೀ*ಲ ವಿಡಿಯೋ ವನ್ನು ತೋರಿಸಿ ಹಣ ನೀಡುವಂತೆ ಆಕೆಯ ಮಾವನಿಗೆ ಒತ್ತಾಯಿಸಿದ್ದಾನೆ ಎಂದು ಎಫ್‌ಐಆರ್ ನಲ್ಲಿ ದಾಖಲಾಗಿದೆ.
ಜನವರಿ 13 ರಂದು ಚೌಹಾಣ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 64 (1) (ಅತ್ಯಾಚಾರ), 308 (5) ( ಜೀವ ಬೆದರಿಕೆ ಮೂಲಕ ಸುಲಿಗೆ), 296 (ಅಶ್ಲೀ*ಲ ಕೃತ್ಯ) ಮತ್ತು 351 (3) (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿಧಿ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವ್ ಕುಮಾರ್ ಸಿಂಗ್ ಅವರು ಅಜಿತ್ಪಾಲ್ ಸಿಂಗ್ ಚೌಹಾಣ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
MUST WATCH
ಹೊಸ ಸೇರ್ಪಡೆ
Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು
Maha Kumbh; ಐಐಟಿ ಬಾಂಬೆಯಲ್ಲಿ ಕಲಿತ ಏರೋಸ್ಪೇಸ್ ಇಂಜಿನಿಯರ್ ಈಗ ಬಾಬಾ!
Kundapura: ಆಶ್ರಯ ನೀಡಿದ ಕೊರಗರಿಗೇ ಈಗ ಭೂಮಿ ಇಲ್ಲ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
Mangaluru: ಕದ್ರಿ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ; ಕರಾವಳಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.