ಪೌರತ್ವ ತಿದ್ದುಪಡಿ ಕಾಯ್ದೆ…ನೇತಾಜಿ ಸಂಬಂಧಿ ಚಂದ್ರಕುಮಾರ್ ಬೋಸ್ ಟ್ವೀಟ್ ನಲ್ಲೇನಿದೆ?
ಭಾರತವನ್ನು ಬೇರೆ ಯಾವುದೇ ದೇಶದ ಜತೆ ಯಾಕೆ ಹೋಲಿಸಬೇಡಿ
Team Udayavani, Dec 24, 2019, 12:03 PM IST
ಕೋಲ್ಕತಾ:ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ನೇತಾಜಿ ಸುಭಾಶ್ಚಂದ್ರ ಬೋಸ್ ಸಂಬಂಧಿ, ಪಶ್ಚಿಮಬಂಗಾಳ ಬಿಜೆಪಿ ಘಟಕದ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ.
“ಒಂದು ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ 2019 ಯಾವುದೇ ಧರ್ಮಕ್ಕೆ ಸಂಬಂಧಿಸಿದ್ದಲ್ಲ ಎಂದಾದರೆ ಯಾಕೆ ಕೇವಲ ಹಿಂದು, ಸಿಖ್, ಬೌದ್ಧ, ಕ್ರಿಶ್ಚಿಯನ್, ಪಾರ್ಸಿ ಮತ್ತು ಜೈನರು ಎಂದು ಹೇಳಬೇಕು. ಯಾಕೆ ಮುಸ್ಲಿಮರನ್ನು ಸೇರ್ಪಡೆಗೊಳಿಸಿಲ್ಲ. ಹೀಗಾದರೆ ಮಾತ್ರ ಅದು ಪಾರದರ್ಶಕವಾಗಲಿದೆ ಎಂದು ಬೋಸ್ ಟ್ವೀಟರ್ ನಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಭಾರತವನ್ನು ಬೇರೆ ಯಾವುದೇ ದೇಶದ ಜತೆ ಯಾಕೆ ಹೋಲಿಸಬೇಡಿ. ಒಂದು ದೇಶವಾಗಿ ಎಲ್ಲಾ ಧರ್ಮ, ವರ್ಗಗಳಿಗೆ ಸಮಾನ ಅವಕಾಶಗಳಿವೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ. ನೂತನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಬಿಜೆಪಿ ಪಶ್ಚಿಮಬಂಗಾಳದಲ್ಲಿ ಪಾದಯಾತ್ರೆ ನಡೆಸಿದ ದಿನದಂದೇ ಬೋಸ್ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
If #CAA2019 is not related to any religion why are we stating – Hindu,Sikh,Boudha, Christians, Parsis & Jains only! Why not include #Muslims as well? Let’s be transparent
— Chandra Kumar Bose (@Chandrabosebjp) December 23, 2019
ಪಶ್ಚಿಮಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬಿಜೆಪಿ ನಡೆಸಿದ ಪಾದಯಾತ್ರೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು. ಅಲ್ಲದೇ ಬಿಜೆಪಿ ಸಿಎಎ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.