Mumbai: ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಗುಂಡಿನ ದಾಳಿ
Team Udayavani, Feb 3, 2024, 8:33 AM IST
ಮುಂಬಯಿ: ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ಶಿವಸೇನೆ ಮುಖಂಡ ಮಹೇಶ್ ಗಾಯಕ್ವಾಡ್ ಮೇಲೆ ಬಿಜೆಪಿ ಶಾಸಕ ಗಣೇಶ್ ಗಾಯಕ್ವಾಡ್ ಗುಂಡು ಹಾರಿಸಿಡಾ ಘಟನೆ ಶುಕ್ರವಾರ ತಡರಾತ್ರಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರುವ ತನಕ ಹೋಗಿತ್ತು ಅದರಂತೆ ಇಬ್ಬರು ರಾಜಕಾರಣಿಗಳು ಪರಸ್ಪರ ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ತೆರಳಿದ್ದಾರೆ ಅಲ್ಲದೆ ಈ ವೇಳೆ ಇಬ್ಬರು ರಾಜಕಾರಣಿಗಳ ಬೆಂಬಲಿಗರೂ ಕೂಡ ಅಲ್ಲಿ ಸೇರಿದ್ದರು ಈ ನಡುವೆ ಎರಡು ಕಡೆಯವರ ನಡುವೆ ವಾಗ್ವಾದ ನಡೆಯಿತು ಮತ್ತು ಗಣೇಶ್ ಗಾಯಕ್ವಾಡ್ ಅವರು ಮಹೇಶ್ ಗಾಯಕ್ವಾಡ್ ಮೇಲೆ ನಾಲ್ಕು ಸುತ್ತಿನ ಗುಂಡುಗಳನ್ನು ಹಾರಿಸಿದ್ದಾರೆ ಅಲ್ಲದೆ ಘಟನೆಯಲ್ಲಿ ಶಿವಸೇನೆ ಶಾಸಕ ರಾಹುಲ್ ಪಾಟೀಲ್ ಕೂಡ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಗಾಯಗೊಂಡ ಇಬ್ಬರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಗುಂಡು ಹಾರಿಸಿದ ಗಣಪತ್ ಗಾಯಕ್ವಾಡ್ ಅವರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ ಜೊತೆಗೆ ಅವರು ಬಳಸಿದ ಗನ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗಾಯಗೊಂಡ ಮಹೇಶ್ ಗಾಯಕ್ವಾಡ್ ಅವರನ್ನು ಮೊದಲು ಉಲ್ಲಾಸನಗರದ ಮೀರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ರಾತ್ರಿ 11 ಗಂಟೆಗೆ ಥಾಣೆಯ ಜುಪಿಟರ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ ಜುಪಿಟರ್ ಆಸ್ಪತ್ರೆಯಲ್ಲಿ ಶಿವಸೇನೆ ನಾಯಕನ ಬೆಂಬಲಿಗರು ಜಮಾಯಿಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಆಸ್ಪತ್ರೆ ಸುತ್ತ ಹೆಚ್ಚಿನ ಪೊಲೀಸ್ ಸಿಬಂದಿಗಳನ್ನು ನೇಮಕಗೊಳಿಸಿದ್ದಾರೆ.
ಇದನ್ನೂ ಓದಿ: Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
VIDEO | Shiv Sena’s Kalyan City President Mahesh Gaikwad was shot at in Ulhasnagar. More details are awaited. pic.twitter.com/wp43OmdDgG
— Press Trust of India (@PTI_News) February 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.