ರಾಹುಲ್ ಗಾಂಧಿ ಖಿಲ್ಜಿ ಸಂತಾನ ಎಂದ ಬಿಜೆಪಿ ನಾಯಕ: ಎಫ್ಐಆರ್
Team Udayavani, Dec 9, 2017, 3:38 PM IST
ಮುಂಬಯಿ : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು 13ನೇ ಶತಮಾನದ ಲೂಟಿಕೋರ ಅಲಾ ಉದ್ ದೀನ್ ಖಿಲ್ಜಿಗೆ ಹೋಲಿಸಿದ ಬಿಜೆಪಿ ನಾಯಕ ಜಿವಿಎಲ್ ನರಸಿಂಹ ರಾವ್ ಅವರಿಗೀಗ ಕಾನೂನು ಸಂಕಷ್ಟ ಎದುರಾಗಿದೆ.
ರಾಹುಲ್ ಅವರನ್ನು ಖಿಲ್ಜಿ ಯೊಂದಿಗೆ ಹೋಲಿಸಿದ ನರಸಿಂಹ ರಾವ್ ವಿರುದ್ಧ ಮುಂಬಯಿ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ನಿನ್ನೆ ಶುಕ್ರವಾರ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ.
ಬಿಜೆಪಿ ನಾಯಕ ನರಸಿಂಹ ರಾವ್ ಅವರು ರಾಹುಲ್ ಗಾಂಧಿ ಅವರನ್ನು ತಮ್ಮ ಟ್ವಿಟರ್ನಲ್ಲಿ “ಖಿಲ್ಜಿ ಯ ಸಂತಾನ’ದವರೆಂದು ಜರೆದಿದ್ದಾರೆ ಎಂಬುದಾಗಿ ನಿರುಪಮ್ ತಮ್ಮ ಪೊಲೀಸ್ ದೂರಿನಲ್ಲಿ ಹೇಳಿದ್ದಾರೆ. ರಾವ್ ಅವರ ಟ್ವಿಟರ್ ಖಾತೆಯನ್ನು ಪರಾಮರ್ಶಿಸಲಾಗಿದೆ.
ಬಿಜೆಪಿ ನಾಯಕನ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ; ಮೇಲಾಗಿ ಅವರು ತಮ್ಮ ಹೇಳಿಕೆ ಸಾರ್ವಜನಿಕರಿಗೆಲ್ಲ ಸಿಗುವಂತೆ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದಾರೆ. ಇದು ಮಾನಹಾನಿಕರ ಮಾತ್ರವಲ್ಲದೆ ಕ್ರಿಮಿನಲ್ ಸ್ವರೂಪದ್ದೂ ಆಗಿದೆ ಎಂದು ನಿರುಪಮ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.