ಉಗ್ರರ ಹಿಟ್‌ಲಿಸ್ಟಲ್ಲಿ ಬಿಜೆಪಿ ನಾಯಕರು?
Team Udayavani, Jun 9, 2019, 6:00 AM IST
ಜಮ್ಮು: ಕಣಿವೆ ರಾಜ್ಯದ ಬಿಜೆಪಿ ನಾಯಕರ ಜೀವಕ್ಕೆ ಅಪಾಯವಿದ್ದು, ಉಗ್ರ ವಾದಿಗಳು ಅವರ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಹತ್ವದ ಮಾಹಿತಿಯೊಂದನ್ನು ಗುಪ್ತಚರ ಇಲಾಖೆ, ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಗೆ ರವಾನಿಸಿದೆ.
ಉಗ್ರರ ಹಿಟ್ ಲಿಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ಬಿಜೆಪಿ ರಾಜ್ಯಾಧ್ಯಕ್ಷ ರವಿಂದರ್ ರೈನಾ ಹೆಸರೂ ಇದೆ ಎಂದು ಮಾಹಿತಿಯಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಜಮ್ಮು, ಕಥುವಾ, ಸಾಂಬಾ, ಪೂಂಛ… ಹಾಗೂ ರಜೌರಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗಳಿಗೆ ಹಾಗೂ ರೇಂಜ್ ಅಧಿಕಾರಿಗಳ ಕಚೇರಿಗಳಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿ, ಬಿಗಿಭದ್ರತೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆರ್‌ಎಸ್‌ಎಸ್ ಪ್ರಚಾರಕರಾಗಿರುವ ರೈನಾರನ್ನು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಕಳೆದ ವರ್ಷ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.