ಬಿಜೆಪಿ ಮುಖಂಡನ ಅಪ್ರಾಪ್ತ ವಯಸ್ಕ ಪುತ್ರ ಸೇರಿ ನಾಲ್ವರು ಅತ್ಯಾಚಾರ ಆರೋಪದಲ್ಲಿ ಬಂಧನ
Team Udayavani, Jul 16, 2023, 2:44 PM IST
ಭೋಪಾಲ್: 19 ವರ್ಷದ ಯುವತಿಯೊಬ್ಬಳ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದರಲ್ಲಿ ಮಧ್ಯಪ್ರದೇಶದ ಸ್ಥಳೀಯ ಬಿಜೆಪಿ ನಾಯಕನ ಪುತ್ರನೂ ಭಾಗಿಯಾಗಿರುವ ಬಗ್ಗೆ ಆರೋಪಿಸಲಾಗಿದೆ.
ಒಂದು ವೇಳೆ ಸ್ಥಳೀಯ ಪಕ್ಷದ ಕಾರ್ಯಕರ್ತನ ಮಗನು ಅಪರಾಧದಲ್ಲಿ ತೊಡಗಿಸಿಕೊಂಡಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ಜನತಾ ಪಕ್ಷದ ದತಿಯಾ ಜಿಲ್ಲಾ ಘಟಕದ ಮುಖ್ಯಸ್ಥರು ಹೇಳಿದ್ದಾರೆ.
ಶುಕ್ರವಾರ ಮಧ್ಯಾಹ್ನ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಮಹಿಳೆಯನ್ನು ನಾಲ್ವರು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಇದುವರೆಗೆ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಿದ್ದಾರೆ ಮತ್ತು ಇಬ್ಬರು ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಉನಾವ್ ಪೊಲೀಸ್ ಠಾಣೆಯ ಉಸ್ತುವಾರಿ ಯದ್ವೇಂದ್ರ ಸಿಂಗ್ ಗುರ್ಜರ್ ಭಾನುವಾರ ಹೇಳಿದ್ದಾರೆ.
ತಲೆಮರೆಸಿಕೊಂಡಿರುವ ಆರೋಪಿಗಳಿಗೆ 10,000 ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದರು.
ಇಲ್ಲಿಯವರೆಗೆ ಬಂಧಿಸಲ್ಪಟ್ಟವರಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತನ ಅಪ್ರಾಪ್ತ ಮಗನೂ ಸೇರಿದ್ದು, ಪ್ರಕರಣದಲ್ಲಿ ದಾಖಲಾದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಅವರ ಹೆಸರು ಕಾಣಿಸಿಕೊಂಡಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸುರೇಂದ್ರ ಬುಧೋಲಿಯಾ ಅವರನ್ನು ಈ ಬಗ್ಗೆ ಕೇಳಿದಾಗ, ಘಟನೆ ದುರದೃಷ್ಟಕರ ಮತ್ತು ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ಇನ್ನೂ ದಾಖಲಿಸಿಲ್ಲ. ಒಂದು ವೇಳೆ ಸಂತ್ರಸ್ತೆ ಪೊಲೀಸರಿಗೆ ತನ್ನ ಹೇಳಿಕೆಯಲ್ಲಿ ಬಿಜೆಪಿ ಪದಾಧಿಕಾರಿಯ ಮಗನ ಹೆಸರನ್ನು ಹೇಳಿದರೆ, ಪಕ್ಷವು ಅವರಿಗೆ (ಸ್ಥಳೀಯ ಕಾರ್ಯಕರ್ತ) ನೋಟಿಸ್ ನೀಡುತ್ತದೆ. ನಂತರ ಪಕ್ಷ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಬುಧೋಲಿಯಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.