Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
ಅಧಿಕಾರಕ್ಕೆ ಮುನ್ನವೇ ಅಘಾಡಿ ಒಕ್ಕೂಟದಲ್ಲಿ ಅಧಿಕಾರಕ್ಕೆ ಜಟಾಪಟಿ
Team Udayavani, Nov 22, 2024, 6:47 AM IST
ಮುಂಬಯಿ: ಮಹಾರಾಷ್ಟ್ರ ಚುನಾವಣೆ ಬಳಿಕ ಗುರುವಾರ ಮತ್ತೆರಡು ಸಮೀಕ್ಷೆಗಳು ಬಿಡುಗಡೆಯಾಗಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಬಹುಮತ ಸಾಧಿಸಲಿದೆ ಎಂದು ಅವುಗಳು ಹೇಳಿಕೊಂಡಿವೆ. ಟುಡೇಸ್ ಚಾಣಕ್ಯ ಸಮೀಕ್ಷೆಯ ಪ್ರಕಾರ, 288 ಕ್ಷೇತ್ರಗಳಲ್ಲಿ ಮಹಾಯುತಿ 175 ಕ್ಷೇತ್ರಗಳಲ್ಲಿ(11 ಕ್ಷೇತ್ರ ಹೆಚ್ಚಳ ಅಥವಾ ಕಡಿಮೆ), ಮಹಾ ವಿಕಾಸ್ ಅಘಾಡಿ 100 ಕ್ಷೇತ್ರಗಳಲ್ಲಿ(11 ಕ್ಷೇತ್ರ ಹೆಚ್ಚಳ ಅಥವಾ ಕಡಿಮೆ), ಇತರೆ 13 ಕ್ಷೇತ್ರಗಳಲ್ಲಿ(5 ಕ್ಷೇತ್ರ ಹೆಚ್ಚು ಅಥವಾ ಕಡಿಮೆ) ಗೆಲುವು ಸಾಧಿಸಲಿವೆ. ಆ್ಯಕ್ಸಿಸ್ ಮೈ ಇಂಡಿಯಾ ಪ್ರಕಾರ 178-200 ಕ್ಷೇತ್ರಗಳಲ್ಲಿ ಮಹಾಯುತಿ, 82-102 ಕ್ಷೇತ್ರಗಳಲ್ಲಿ ಮಹಾವಿಕಾಸ್ ಅಘಾಡಿ ಹಾಗೂ 6-12 ಕ್ಷೇತ್ರಗಳಲ್ಲಿ ಇತರರು ಗೆಲುವು ಸಾಧಿಸಲಿದ್ದಾರೆ.
ಅಧಿಕಾರಕ್ಕೆ ಮುನ್ನವೇ ಅಘಾಡಿ ಒಕ್ಕೂಟದಲ್ಲಿ ಅಧಿಕಾರಕ್ಕೆ ಜಟಾಪಟಿ
ಮಹಾರಾಷ್ಟ್ರ ಚುನಾವಣೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಮಹಾ ವಿಕಾಸ ಅಘಾಡಿಯ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಶಿವಸೇನೆ ಉದ್ಧವ್ ಬಣದ ನಡುವೆ ಸಿಎಂ ಗಾದಿಗೆ ಕಿತ್ತಾಟ ಆರಂಭವಾಗಿದೆ. ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ “ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾ ವಿಕಾಸ ಅಘಾಡಿ ಸರಕಾರ ರಚನೆಯಾಗಲಿದೆ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಸಂಜಯ ರಾವತ್ “ಇದನ್ನು ನಾನು ಮಾತ್ರವಲ್ಲ ಯಾರೂ ಒಪ್ಪಲ್ಲ. ನೀವು ಸಿಎಂ ಆಗಬೇಕು ಎಂದು ಕಾಂಗ್ರೆಸ್ ಹೈ ಕಮಾಂಡ್ ಹೇಳಿದ್ದರೆ ಅದನ್ನು ರಾಹುಲ್ ಅಥವಾ ಸೋನಿಯಾ ಗಾಂಧಿ ಘೋಷಿಸಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.