ತೆಲಂಗಾಣದತ್ತ ಬಿಜೆಪಿ ನೋಟ
Team Udayavani, May 21, 2018, 11:12 AM IST
ಹೈದರಾಬಾದ್/ಚೆನ್ನೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರಕಾರ ರಚಿಸಲು ಸಾಧ್ಯವಾಗದೇ ಇದ್ದರೂ ದಕ್ಷಿಣ ಭಾರತದಲ್ಲಿ ಅದರ ಪ್ರಭಾವ ಮತ್ತು ಸಂಘಟನೆ ವಿಸ್ತರಿಸಲು ಮುಂದಾಗಿದೆ. 2019ರ ಲೋಕಸಭೆ ಚುನಾವಣೆ ಜತೆಗೆ ತೆಲಂಗಾಣ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಹೀಗಾಗಿ, ಪಕ್ಷದ ನಾಯಕರು ರಾಜ್ಯಕ್ಕೆ ಹೆಚ್ಚಿನ ಗಮನ ಹರಿಸಲಿದ್ದಾರೆ ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಕೆ.ಲಕ್ಷ್ಮಣ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ತೆಲಂಗಾಣ ಸಹಿತ ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿಯೂ ಪಕ್ಷವನ್ನು ಬಲಪಡಿಸುವ ಬಗ್ಗೆ ಹೆಚ್ಚಿನ ವಿಚಾರ ವಿನಿಮಯ ನಡೆದಿದೆ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಲ ಮತ್ತು ಒಡಿಶಾದಲ್ಲಿನ ಮುಂದಿನ ವಿಧಾನಸಭೆ ಚುನಾವಣೆ ಮತ್ತು ಅದಕ್ಕಿಂತ ಮೊದಲೇ ಪಕ್ಷವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವ ಬಗ್ಗೆ ಗುರಿ ಹಾಕಿಕೊಳ್ಳಲಾಗಿದೆ ಎಂದಿದ್ದಾರೆ ಲಕ್ಷ್ಮಣ.
ಅದಕ್ಕೆ ಪೂರ್ವಭಾವಿಯಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮುಂದಿನ ತಿಂಗಳು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಸಂಘಟನಾತ್ಮಕವಾಗಿ ಬಿಜೆಪಿ ರಾಜ್ಯದಲ್ಲಿ ಬಲವಾಗಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲವರ್ಧಿಸ
ಬೇಕಾದ ಕೆಲಸವಾಗಬೇಕಾಗಿದೆ. ಅದಕ್ಕಾಗಿ “ಪೇಜ್ ಪ್ರಮುಖ್’ರನ್ನು ನೇಮಕ ಮಾಡಲಾಗುತ್ತದೆ. ಅವರ ನೇತೃತ್ವದಲ್ಲಿ ಪ್ರತಿ ಕುಟುಂಬವನ್ನೂ ಸಂಪರ್ಕಿಸಿ ಕೇಂದ್ರ ಸರಕಾರದ ಸಾಧನೆಗಳನ್ನು ವಿವರಿಸಲಾಗುತ್ತದೆ. ತೆಲಂಗಾಣ ರಾಷ್ಟ್ರ ಸಮಿತಿ ಸರಕಾರದ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಲಕ್ಷ್ಮಣ ವಿವರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಲಂಗಾಣಕ್ಕೆ ಹೆದ್ದಾರಿ, ರೈಲ್ವೆ ಯೋಜನೆಗಳು, ಉಜ್ವಲಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಡುಗೆ ಅನಿಲ ಸಂಪರ್ಕಗಳನ್ನು ನೀಡಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಗೆ 104 ಸ್ಥಾನಗಳು ಸಿಕ್ಕಿರುವುದು ಟಿಆರ್‌ಎಸ್ ಮತ್ತು ಟಿಡಿಪಿ ನಿದ್ದೆಗೆಡಿಸಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ತೆಲುಗು ಭಾಷಿಕರು ಬಿಜೆಪಿಯನ್ನೇ ಬೆಂಬಲಿಸಿದ್ದಾರೆ. ಹೀಗಾಗಿ ಈ ಪ್ರದೇಶದ 20ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಬಿಜೆಪಿಗೆ ಮತ ಹಾಕಬೇಡಿ ಎಂದು ಕರ್ನಾಟಕದಲ್ಲಿರುವ ತೆಲುಗು ಭಾಷಿಕರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಬೆಳವಣಿಗೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಮತ್ತು ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸವಾಲಾಗಿದೆ. ಇದೇ ವೇಳೆ ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈಶಾನ್ಯ ರಾಜ್ಯಗಳ ಎನ್‌ಡಿಎ ನಾಯಕರ ಸಭೆಯಲ್ಲಿ ಭಾಗವಹಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಶಾಸಕರನ್ನು ಖರೀದಿಸಲು ಮುಂದಾಗಿತ್ತು ಎಂಬ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತನಿಖೆಗೆ ಆದೇಶ ನೀಡಬೇಕು. ಈ ಮೂಲಕ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡು ತ್ತಿದ್ದಾರೆ ಎಂದು ಸಾಬೀತುಪಡಿಸಲಿ
– ಜೈವೀರ್ ಶೆರ್ಗಿಲ್, ಕಾಂಗ್ರೆಸ್ ವಕ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.