“ಮಹಾ” ರಾಜಕೀಯ; ಬಿಜೆಪಿಯ ಕಾಳಿದಾಸ್ ನೇಮಕ, ಪ್ರೋ ಟೆಮ್ ಸ್ಪೀಕರ್ ಅಂದರೆ ಏನು?


Team Udayavani, Nov 26, 2019, 6:59 PM IST

kalidas

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಪ್ರೋ-ಟೆಮ್ (ಹಂಗಾಮಿ) ಸ್ಪೀಕರ್ ಆಗಿ ಬಿಜೆಪಿಯ ಕಾಳಿದಾಸ್ ಕೋಳಂಬ್ಕರ್ ಅವರನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಮಂಗಳವಾರ ಆಯ್ಕೆ ಮಾಡಿದ್ದು, ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ಮೂಲಕ ಬುಧವಾರ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಳಿದಾಸ್ ಅವರು ನೂತನ ಸ್ಪೀಕರ್ ಆಯ್ಕೆಯಾಗುವವರೆಗೆ ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಬುಧವಾರ ಬೆಳಗ್ಗೆ 8ಗಂಟೆಗೆ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಕಲಾಪ ನಡೆಯಲಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶಿವಸೇನಾದಲ್ಲಿ ಒಂದು ಬಾರಿ ಶಾಸಕರಾಗಿದ್ದ ಕಾಳಿದಾಸ್ ಅವರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. 2019ರಲ್ಲಿ ಕಾಂಗ್ರೆಸ್ ತೊರೆದಿದ್ದ ಕಾಳಿದಾಸ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಕೋಳಂಬ್ಕರ್ ಅವರು ವಾಡ್ಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಪ್ರೋ ಟೆಮ್ ಸ್ಪೀಕರ್ ಆಗಿ ರಾಜ್ಯಪಾಲರು ವಿಧಾನಸಭೆಯಲ್ಲಿ ಪ್ರಮಾಣವಚನ ಬೋಧಿಸಲಿದ್ದು, ನಂತರ ವಿಧಾನಸಭೆಯಲ್ಲಿ ನೂತನವಾಗಿ ಆಯ್ಕೆಯಾದ 287 ಶಾಸಕರಿಗೂ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

ನಾಟಕೀಯ ಬೆಳವಣಿಗೆಯಲ್ಲಿ ಮಂಗಳವಾರ ಮಧ್ಯಾಹ್ನ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಳಿದಾಸ್ ಅವರನ್ನು ಪ್ರೋ ಟೆಮ್ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.

ಏನಿದು ಪ್ರೋ ಟೆಮ್?

ಪ್ರೋ ಟೆಮ್ ಲ್ಯಾಟೀನ್ ಭಾಷೆಯ ಪದವಾಗಿದೆ. Pro tem ಅಂದರೆ ತಾತ್ಕಾಲಿಕ ಎಂಬ ಅರ್ಥ ಹೊಂದಿದೆ. ಚುನಾವಣೆ ನಂತರ ನಡೆಯಲಿರುವ ಮೊದಲ ಬಾರಿ ವಿಧಾನಸಭೆಯ ಅಥವಾ ಸಂಸದೀಯ ಕಲಾಪ ನಡೆಯುವ ಮೊದಲು ಪ್ರೋ ಟೆಮ್ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ.  ನೂತನವಾಗಿ ಆಯ್ಕೆಯಾದ ಶಾಸಕರು ಅಥವಾ ಸಂಸದರಿಗೆ ಪ್ರಮಾಣವಚನ ಬೋಧಿಸುವ ಹೊಣೆಗಾರಿಕೆ ಹಂಗಾಮಿ ಸ್ಪೀಕರ್ ಅವರದ್ದಾಗಿದೆ. ನಂತರ ಕಾಯಂ ಸ್ಪೀಕರ್ ಆಯ್ಕೆಯ ಚುನಾವಣೆ ನಡೆಸುತ್ತಾರೆ. ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಇದೀಗ ಕಾಳಿದಾಸ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ನಾಳೆ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸಲಿದ್ದು, ವಿಶ್ವಾಸ ಮತ ಯಾಚನೆಯ ಹೊಣೆಗಾರಿಕೆ ಇವರ ಮೇಲಿರಲಿದೆ.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bias, misinformation complaint: Notice from Center to Wikipedia

Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್‌

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.