ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Team Udayavani, Mar 3, 2021, 9:05 AM IST
ಲಕ್ನೋ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು (ಮಾ.3) ಮುಂಜಾನೆ ಮಡಿಯಾವ ಪ್ರದೇಶದಲ್ಲಿ ನಡೆದಿದೆ.
ಪ್ರಾಥಮಿಕ ವರದಿಯ ಪ್ರಕಾರ ಕೌಶಲ್ ಕಿಶೋರ್ ಪುತ್ರ ಆಯುಷ್ (30) ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಬೈಕ್ ನಲ್ಲಿ ಬಂದ ಆಗಂತುಕರು ಏಕಾಏಕಿ ಗುಂಡು ಹಾರಿಸಿದ್ದಾರೆ, ಪರಿಣಾಮ ಆಯುಷ್ ಎದೆಯ ಭಾಗಕ್ಕೆ ಗಾಯಗಳಾಗಿದ್ದು, ಸ್ಥಳಕ್ಕೆ ಬಂದ ಉತ್ತರಪ್ರದೇಶ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಆಯುಷ್ ಪ್ರಾಣಾಪಾಯದಿಂದ ಪಾರಾಗಿದ್ದು, ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ಹಳೆ ವೈಷಮ್ಯವೇ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ
ಈ ಕುರಿತು ಮಾಹಿತಿ ನೀಡಿದ ಸಂಸದ ಕೌಶಲ್ ಕಿಶೋರ್, ಆಯುಷ್ ಪ್ರಾಣಾಪಾಯದಿಮದ ಪಾರಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚುವ ವಿಶ್ವಾಸವಿದೆ ಎಂದರು.
Lucknow: Son of MP Kaushal Kishore was shot in his chest
“Ayush, son of MP has received a gun shot injury and was brought to the hospital for treatment. His condition is stable now. Case will be registered. Investigation underway,” says police pic.twitter.com/jQQEP4V1ho
— ANI UP (@ANINewsUP) March 3, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.