Road Mishap: ಭೀಕರ ರಸ್ತೆ ಅಪಘಾತ… ಬಿಜೆಪಿ ಸಂಸದ ಸತೀಶ್ ಚಂದ್ರ ದುಬೆ ಆಸ್ಪತ್ರೆಗೆ ದಾಖಲು
Team Udayavani, Sep 18, 2023, 12:31 PM IST
ಪಾಟ್ನಾ: ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸಂಸದ ಸತೀಶ್ ಚಂದ್ರ ದುಬೆ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ತಡರಾತ್ರಿ ಪಾಟ್ನಾದಲ್ಲಿ ಸಂಭವಿಸಿದೆ.
ಭಾನುವಾರ ತಡರಾತ್ರಿ ಪಾಟ್ನಾದ ಮಹಾತ್ಮ ಗಾಂಧಿ ಸೇತು ಸೇತುವೆಯ ಮೇಲೆ ಕಾರು ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುಬೆ ಸೇರಿದಂತೆ ಇತರ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸಂಸದರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಕಂಟೈನರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಅವಘಡದಿಂದಾಗಿ ಗಾಂಧಿ ಸೇತು ಸೇತುವೆ ಮೇಲೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದುಬೆ ಮತ್ತು ಅವರ ಅಂಗರಕ್ಷಕ ಜೊತೆಗೆ ವಾಹನದ ಚಾಲಕ ಕೂಡ ಗಾಯಗೊಂಡಿದ್ದಾರೆ.
48 ವರ್ಷದ ಬಿಜೆಪಿ ಸಂಸದ, ಸತೀಶ್ ಚಂದ್ರ ದುಬೆ ಅವರು 2022 ರಲ್ಲಿ ಸಂಸತ್ತಿನ ಮೇಲ್ಮನೆಗೆ ಚುನಾಯಿತರಾಗಿದ್ದರು. ಇದಕ್ಕೂ ಮೊದಲು ಅವರು ಬಿಹಾರದ ವಾಲ್ಮೀಕಿ ನಗರ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು.
ಚಾಲಕ ಮತ್ತು ಅಂಗರಕ್ಷಕರ ಸ್ಥಿತಿ ಗಂಭೀರ:
ಬಿಜೆಪಿ ಸಂಸದರು ಭಾನುವಾರ ರಾತ್ರಿ ಬಗಾಹಾದಿಂದ ಪಾಟ್ನಾಗೆ ಹಿಂತಿರುಗುತ್ತಿದ್ದಾಗ ಗಾಂಧಿ ಸೇತು ಸೇತುವೆಯ ಮೇಲೆ ಅವರ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಸಂಸದರ ಚಾಲಕ ಮತ್ತು ಅಂಗರಕ್ಷಕನ ಸ್ಥಿತಿ ಚಿಂತಾಜನಕವಾಗಿದೆ. ಸಂಸದ ಸತೀಶ್ ಚಂದ್ರ ಅವರಿಗೂ ಗಾಯಗಳಾಗಿದ್ದು, ಸದ್ಯ ಪಾಟ್ನಾದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Tragedy: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.