![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 10, 2020, 7:46 AM IST
ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜ್ಯದ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಸಿನ ಆಂತರಿಕ ವಿಚಾರ, ಈ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.
ಸಿಎಂ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಸಕ್ತಿ ಹೊಂದಿಲ್ಲ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಸರ್ಕಾರ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದರು.
ಮಧ್ಯಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಹಠಾತ್ ಬೆಳವಣಿಗೆಯಲ್ಲಿ ಸಿಎಂ ಕಮಲ್‌ನಾಥ್ ಸಂಪುಟದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.ಕಾಮರಾಜ್ ಸೂತ್ರ ಅನುಸರಿಸಲು ಮುಂದಾಗಿರುವ ಅವರು, ಭಿನ್ನಮತೀಯ ಶಾಸಕರಿಗೆ ಕೂಡ ಕೆಲ ಸ್ಥಾನಗಳನ್ನು ನೀಡುವ ಮೂಲಕ ಸರಕಾರ ಉಳಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಲಿದ್ದಾರೆ ಎಂದು ವಿಶ್ಲೇಷಿಸ ಲಾಗುತ್ತಿದೆ.
ಮಾತ್ರವಲ್ಲದೆ ಸೋಮವಾರ, ಮಧ್ಯಪ್ರದೇಶ ಕಾಂಗ್ರೆಸ್ ನ 18 ಶಾಸಕರು, ವಿಶೇಷ ವಿಮಾನದಲ್ಲಿ ಏಕಾಏಕಿ ಬೆಂಗಳೂರಿಗೆ ಬಂದಿಳಿದಿದ್ದರು. . ಇವರಲ್ಲಿ ಐವರು, ಕಮಲ್ ಸಂಪುಟದಲ್ಲಿ ಸಚಿವರೆಂದು ಹೇಳಲಾಗಿದೆ. ಈ ಎಲ್ಲ ನಾಯಕರು, ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂದಿಯಾ ಅವರ ಆಪ್ತರೆಂದು ಹೇಳಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.