J&K ;ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ನೌಶೇರಾದಿಂದ ರೈನಾ ಕಣಕ್ಕೆ
Team Udayavani, Sep 2, 2024, 7:35 PM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ(BJP) ಸೋಮವಾರ(ಸೆ 2) ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ರವೀಂದರ್ ರೈನಾ ಅವರು ಹೆಸರು ಪಟ್ಟಿಯಲ್ಲಿದ್ದು ನೌಶೇರಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಲಾಲ್ ಚೌಕ್ ನಿಂದ ಐಜಾಜ್ ಹುಸೇನ್, ಈದ್ಗಾ ದಿಂದ ಆರಿಫ್ ರಾಜಾ, ಖಾನ್ ಸಾಹೀಬ್ ನಿಂದ ಡಾ. ಮೊಹಮದ್ ಮಿರ್ , ಚ್ರಾರ್ ಇ ಶರೀಫ್ ನಿಂದ ಜಾಯಿದ್ ಹುಸೇನ್, ರಾಜೌರಿ (ಎಸ್ ಟಿ ಮೀಸಲು ಕ್ಷೇತ್ರ) ವಿಭೋದ್ ಗುಪ್ತಾ ಅವರು ಕಣಕ್ಕಿಳಿಯಲಿದ್ದಾರೆ. ರವೀಂದರ್ ರೈನಾ ಅವರು ಈಗಾಗಲೇ ನೌಶೇರಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
90 ಸದಸ್ಯರ ವಿಧಾನಸಭೆಗೆ 3 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು ಸೆಪ್ಟೆಂಬರ್ 18 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 1 ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಮತಗಳನ್ನು ಎಣಿಕೆ ಅಕ್ಟೋಬರ್ 8 ರಂದು ನಡೆಯಲಿದೆ.
2019 ರಲ್ಲಿ ರಾಜ್ಯದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಂತರ ಮತ್ತು ಅದರ ರಾಜ್ಯತ್ವವನ್ನು ಹಿಂತೆಗೆದುಕೊಂಡ ನಂತರ ಇದು ಬಿಜೆಪಿಗೆ ಮಹತ್ವದ ಚುನಾವಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.