Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ
ಮಹಾರಾಷ್ಟ್ರ 19 ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸುತ್ತದೆ...
Team Udayavani, Nov 23, 2024, 9:02 PM IST
ಮುಂಬಯಿ: ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ರವೀಂದ್ರ ಚವಾಣ್ ಗೆದ್ದಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸಂತುಕ್ರಾವ್ ಹಂಬಾರ್ಡೆ ಅವರನ್ನು 1457 ಅಲ್ಪ ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ 586788 ಮತಗಳು ಸಿಕ್ಕಿದ್ದರೆ, ಬಿಜೆಪಿ ಅಭ್ಯರ್ಥಿಗೆ 585331 ಮತಗಳು ಸಿಕ್ಕಿವೆ. ಅಲ್ಲಿನ ಸಂಸದರಾಗಿದ್ದ ವಸಂತ್ ಚವಾಣ್ ಆ.26ರಂದು ನಿಧನರಾಗಿದ್ದರು. ಹೀಗಾಗಿ ಅಲ್ಲಿ ಮತ್ತೆ ಚುನಾವಣೆ ನಡೆಸುವ ಅನಿವಾರ್ಯತೆ ಉಂಟಾಗಿತ್ತು.
ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿತ್ತು. 543 ಸದಸ್ಯ ಬಲದ ಲೋಕಸಭೆಯಲ್ಲಿ ಕೇಸರಿ ಪಕ್ಷದ ಸಂಖ್ಯೆ 240.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಪಕ್ಷದ ನಾಯಕ ರಾಹುಲ್ ಗಾಂಧಿ ರಾಯ್ ಬರೇಲಿ ಮತ್ತು ವಯನಾಡ್ ನಿಂದ ಗೆದ್ದಿದ್ದರು.ವಯನಾಡ್ ಸ್ಥಾನವನ್ನು ತೆರವು ಮಾಡಿದ್ದರು. ವಯನಾಡ್ ಗೆದ್ದು ನಾಂದೇಡ್ ಸೋತ ನಂತರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ 99.
ರಾಜ್ಯ ಸಭೆಯಲ್ಲಿ ಬಹುಮತದತ್ತ ಚಿತ್ತ
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಪ್ರಚಂಡ ವಿಜಯವು ರಾಜ್ಯಸಭೆಯಲ್ಲಿ ಅದರ ಭವಿಷ್ಯಕ್ಕೆ ಸಹಕಾರಿ ಎಂಬಂತೆ, ಮೇಲ್ಮನೆಯಲ್ಲಿ ಬಹುಮತವನ್ನು ಪಡೆಯಲು ಸಹಾಯ ಮಾಡಲಿದೆ. ಮಹಾರಾಷ್ಟ್ರ 19 ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸುತ್ತದೆ.
ಪ್ರಸ್ತುತ, ಮೇಲ್ಮನೆಯಲ್ಲಿ ಬಿಜೆಪಿ ಏಳು ಸದಸ್ಯರನ್ನು ಹೊಂದಿದ್ದು, ಕಾಂಗ್ರೆಸ್ ಮೂರು, ಶಿವಸೇನೆ (ಯುಬಿಟಿ) ಎರಡು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮೂರು, ಎನ್‌ಸಿಪಿ (ಶರದ್ ಪವಾರ್) ಎರಡು ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಳೆ) ಒಬ್ಬರು ಸದಸ್ಯರಾಗಿದ್ದಾರೆ.
ರಾಜ್ಯಸಭೆಯಲ್ಲಿ ಬಿಜೆಪಿ 95 ಸಂಸದರನ್ನು ಹೊಂದಿದ್ದು, ಇದರೊಂದಿಗೆ ಮೈತ್ರಿಕೂಟ ಸಂಸದರ ಸಂಖ್ಯೆ 112ಕ್ಕೆ ಏರಿದೆ. ಅಲ್ಲದೆ, ಆಡಳಿತ ಪಕ್ಷವನ್ನು ಬೆಂಬಲಿಸುವ ಆರು ನಾಮನಿರ್ದೇಶಿತ ಸದಸ್ಯರಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಪ್ರತಿನಿಧಿಸುವ ಅತಿ ಹೆಚ್ಚು ಸಂಸದರು ಉತ್ತರ ಪ್ರದೇಶ, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರವಿದೆ.
ಮಹಾರಾಷ್ಟ್ರದಿಂದ ಯಾವುದೇ ತತ್ ಕ್ಷಣದ ಸ್ಥಾನಗಳು ಖಾಲಿಯಿಲ್ಲದಿದ್ದರೂ, ಮೇಲ್ಮನೆಯು ವಿವಿಧ ರಾಜ್ಯಗಳಿಂದ 10 ಖಾಲಿ ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಬಿಜೆಪಿ ಗೆಲ್ಲುವ ಸಾಧ್ಯತೆಯಿದೆ. ನಾಮನಿರ್ದೇಶಿತ ಸದಸ್ಯರ ನಾಲ್ಕು ಸ್ಥಾನಗಳೂ ಖಾಲಿ ಇವೆ.245 ಸದಸ್ಯ ಬಲದ ಸದನದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಬಹುಮತವನ್ನು ದಾಟಲು ಸುಲಭವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.