Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ
Team Udayavani, Oct 1, 2023, 4:51 PM IST
ಭೋಪಾಲ್: ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಜನಪದ ಪಂಚಾಯತ್ ಅಧ್ಯಕ್ಷೆ 30 ವರ್ಷದ ಪೂಜಾ ದಾದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬುರ್ಹಾನ್‌ಪುರದ ತನ್ನ ನಿವಾಸದಲ್ಲಿ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.
ಖಕ್ನಾರ್ ಜನಪದ ಪಂಚಾಯತ್ ಅಧ್ಯಕ್ಷೆ ಪೂಜಾ, ಭಾರತೀಯ ಜನತಾ ಪಕ್ಷದ ಮಾಜಿ ಶಾಸಕ (ನೇಪಾನಗರ) ದಿವಂಗತ ರಾಜೇಂದ್ರ ದಾದು ಅವರ ಮಗಳು. ಬಿಜೆಪಿ ಬೆಂಬಲದೊಂದಿಗೆ ಜನಪದ ಪಂಚಾಯತ್ ಅಧ್ಯಕ್ಷೆಯಾಗಿದ್ದರು.
ಪೊಲೀಸರು ತನಿಖೆ ಆರಂಭಿಸಿದ್ದು, ಹಿರಿಯ ಅಧಿಕಾರಿ ದೇವೇಂದ್ರ ಪಾಟಿದಾರ್ ಅವರು, ಪ್ರಾಥಮಿಕ ತನಿಖೆಯಿಂದ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ ಎಂದಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಆಕೆಯ ನಿರ್ಧಾರದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮನೋಜ್ ಲಾಧ್ವೆ ಹೇಳಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಲೋಕಸಭೆ ಸದಸ್ಯ ಜ್ಞಾನೇಶ್ವರ್ ಪಾಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಬುರ್ಹಾನ್‌ಪುರಕ್ಕೆ ಆಗಮಿಸಿದರು.
ಪೂಜಾ ದಾದು ಅವರ ಹಿರಿಯ ಸಹೋದರಿ ಮಂಜು ದಾದು ಪ್ರಸ್ತುತ ಮಧ್ಯಪ್ರದೇಶ ಮಂಡಿ ಮಂಡಳಿಯ ಉಪಾಧ್ಯಕ್ಷರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.