ಪಂಜಾಬ್ ನೂತನ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ವಿರುದ್ಧ ಮೀಟೂ ಆರೋಪ
Team Udayavani, Sep 20, 2021, 8:46 AM IST
ಚಂಡೀಗಢ: ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಚಮ್‌ಕೌರ್ ಸಾಹಿಬ್ ಕ್ಷೇತ್ರದ ಶಾಸಕ ಚರಣ್‌ಜಿತ್ ಸಿಂಗ್ ಚನ್ನಿ (51 ವ) ಆಯ್ಕೆಯಾಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿರುವ ಇವರನ್ನು ಕಾಂಗ್ರೆಸ್ ಹೈಕಮಾಂಡ್ ಅಚ್ಚರಿಯ ರೀತಿಯಲ್ಲಿ ಆಯ್ಕೆ ಮಾಡಿದೆ.
ಹೀಗಾಗಿ, ಅವರು ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ. ಸೋಮವಾರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿ ಟೀಕಾ ಪ್ರಹಾರ ಆರಂಭಿಸಿದೆ. “ಕಾಂಗ್ರೆಸ್ ನ ಸಿಎಂ ಆಯ್ಕೆಯಾಗಿರುವ ಚರಣ್‌ಜಿತ್ ಚನ್ನಿ 3 ವರ್ಷದಿಂ ಮೀಟೂ ಪ್ರಕರಣ ಎದುರಿಸುತ್ತಿದ್ದಾರೆ. ಅವರು 2018 ರಲ್ಲಿ ಮಹಿಳಾ ಐಎಎಸ್ ಅಧಿಕಾರಿಗೆ ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ದರು. ಪಂಜಾಬ್ ಮಹಿಳಾ ಆಯೋಗವು ನೋಟಿಸ್ ಕಳುಹಿಸಿದೆ” ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಬಿಜೆಪಿ ನಾಯಕ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.
ಮೂರು ವರ್ಷದ ಹಿಂದೆ ನಡೆದಿದ್ದ ಪ್ರಕರಣವು ಈ ವರ್ಷದ ಮೇ ತಿಂಗಳಲ್ಲಿ ಮತ್ತೆ ಮುನ್ನಲೆಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.