144 ಲೋಕಸಭಾ ಕ್ಷೇತ್ರಗಳಲ್ಲಿ ಬಲವರ್ಧನೆಗೆ ಬಿಜೆಪಿ ಚಿಂತನೆ
ನಡ್ಡಾ, ಶಾ ನೇತೃತ್ವದಲ್ಲಿ ಮುಖಂಡರ ಸಭೆ
Team Udayavani, Sep 7, 2022, 7:05 AM IST
ನವದೆಹಲಿ: ದುರ್ಬಲವಾಗಿರುವ 144 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ನಿರ್ಧರಿಸಿದೆ. 2024 ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನಕ್ಕೆ ಬರಲಾಗಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವರ ಸಭೆಯಲ್ಲಿ ಈ ಬಗ್ಗೆ ಪರಾಮರ್ಶೆ ನಡೆಸಲಾಗಿದೆ.
ಪಶ್ಚಿಮ ಬಂಗಾಳ, ತೆಲಂಗಾಣ, ಮಹಾರಾಷ್ಟ್ರ, ಪಂಜಾಬ್, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳಲ್ಲಿನ ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ಪರಾಮರ್ಶೆ ನಡೆಸಲಾಗಿದೆ. ಜತೆಗೆ ಕೇಂದ್ರ ಸಚಿವರಿಗೆ ಈ ಕ್ಷೇತ್ರಗಳಲ್ಲಿ ಪಕ್ಷ ಬಲವರ್ಧನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ವರದಿಯನ್ನೂ ಸಲ್ಲಿಸಿದ್ದಾರೆ.
ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ಗಿರಿರಾಜ್ ಸಿಂಗ್, ಸ್ಮತಿ ಇರಾನಿ, ಪುರುಷೋತ್ತಮ್ ರೂಪಾಲ, ಗಜೇಂದ್ರ ಸಿಂಗ್ ಸೇರಿದಂತೆ 25ಕ್ಕೂ ಹೆಚ್ಚು ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.
ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ, ಕೇಂದ್ರ ಸರ್ಕಾರದ ಹಲವು ಯೋಜನೆಗಳ ಫಲಾನುಭವಿಗಳ ಮೂಲಕ ವಿವಿಧ ಸಮುದಾಯದ ಜನರನ್ನು ತಲುಪುವುದು, ಪಕ್ಷ ದುರ್ಬಲವಾಗಿರುವ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಸಚಿವರು ಭೇಟಿ ನೀಡಿ, ಅವರು ಅಲ್ಲಿನ ರಾಜಕೀಯ ಸ್ಥಿತಿ ಸೇರಿದಂತೆ ಪಕ್ಷದ ನಾಯಕರು ನೀಡಿರುವ ವಿವಿಧ ಸಲಹೆಗಳ ಅನುಷ್ಠಾನದ ಕುರಿತ ಪ್ರಗತಿಯನ್ನು ಪರಿಶೀಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.