Stalin: ನನ್ನ ಹೇಳಿಕೆಯನ್ನು ತಿರುಚಲಾಗಿದೆ, ಬಿಜೆಪಿ ವಿರುದ್ಧ ಕಿಡಿಕಾರಿದ ಉದಯನಿಧಿ ಸ್ಟಾಲಿನ್
Team Udayavani, Dec 4, 2023, 1:28 PM IST
ಹೈದರಾಬಾದ್ : ಸನಾತನ ಸಂಸ್ಥೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.
ಭಾನುವಾರ ಕರೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಈ ವೇಳೆ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಹೇಳಿಕೆಗೆ ಮತ್ತೊಮ್ಮೆ ವಿವರಣೆ ನೀಡಿದರು. ಮಧ್ಯಪ್ರದೇಶದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಹಿಂದಿನ ಹೇಳಿಕೆಗಳನ್ನು ತಿರುಚಿ ಹೇಳಿದ್ದಾರೆ ಎಂದು ಆರೋಪಿಸಿದರು. “ನಾನು ನರಮೇಧಕ್ಕೆ ಕರೆ ನೀಡಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ ಆದರೆ ನಾನು ಇಂದಿಗೂ ನರಮೇಧದ ಬಗ್ಗೆ ಹೇಳಿಕೆ ನೀಡಲಿಲ್ಲ ಆದರೆ, ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಮಾತ್ರ ಹೇಳಿದ್ದೆ. ಆದರೆ ಇದೆ ವಿಚಾರವನ್ನು ತಿರುಚಿ ನನ್ನ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನು ಹೇಳಿದ್ದು ಇದೀಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ ಎಂದು ಹೇಳಿದರು.
ಒಬ್ಬ ಬಾಬಾ ನನ್ನ ತಲೆಗೆ 5 ಕೋಟಿಯಿಂದ 10 ಕೋಟಿ ಬಹುಮಾನ ಘೋಷಿಸಿದ್ದಾರೆ. ಆದರೆ ಸದ್ಯ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ಈ ಹೇಳಿಕೆ ವಿಚಾರವಾಗಿ ಬಾಬಾ ಅವರು ನನ್ನ ಬಳಿ ಕ್ಷಮೆಯಾಚಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: Belagavi Session; ಸರಕಾರ ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ: ಬಿ.ವೈ.ವಿಜಯೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.