ಪ.ಬಂಗಾಲದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಹಲವು ಕ್ರಮ: ECಗೆ BJP ಆಗ್ರಹ
Team Udayavani, May 16, 2019, 4:01 PM IST
ಹೊಸದಿಲ್ಲಿ : ಪಶ್ಚಿಮ ಬಂಗಾಲದಲ್ಲಿ ಆಡಳಿತೆಯು ಸಾಂವಿಧಾನಿಕವಾಗಿ ಸಂಪೂರ್ಣವಾಗಿ ಕುಸಿದು ಬಿದ್ದಿರುವುದರಿಂದ ಚುನಾವಣಾ ಆಯೋಗ ಅಲ್ಲಿ ಮುಕ್ತ, ನಿರ್ಭೀತ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಚುನಾವಣೆ ನಡೆಸಲು ಹಲವಾರು ಕಠಿನ ಉಪಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.
ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಮುಖ್ತರ್ ಅಬ್ಟಾಸ್ ನಕ್ವಿ, ವಿಜಯ್ ಗೋಯಲ್ ಅವರನ್ನು ಒಳಗೊಂಡ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಕ್ತರನ್ನು ಭೇಟಿಯಾಗಿ ಈ ಆಗ್ರಹವನ್ನು ಮಂಡಿಸಿತು.
ಪ.ಬಂಗಾಲದಲ್ಲಿ ಮುಕ್ತ ಮತ್ತು ನಿರ್ಭೀತ ಚುನಾವಣೆ ನಡೆಯಲು ಅಲ್ಲಿನ ಕ್ರಿಮಿನಲ್‌ಗಳು ಮತ್ತು ಹಿಸ್ಟರಿ ಶೀಟರ್ ಗಳ ವಿರುದ್ದ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿತು.
ಕೋಲ್ಕತದಲ್ಲಿ ನಿನ್ನೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರೋಡ್ ಶೋ ವೇಳೆ ಹಿಂಸೆ, ದೊಂಬಿ, ಮಾರಾಮಾರಿ, ವಾಹನಗಳಿಗೆ ಕಿಚ್ಚಿಡುವಿಕೆಯೇ ಮೊದಲಾದ ಘಟನೆಗಳು ನಡೆದಿದ್ದವು. ಇದನ್ನು ಅನುಸರಿಸಿ ಚುನಾವಣಾ ಆಯೋಗ ಸಂವಿಧಾನದ 324ನೇ ವಿಧಿಯನ್ನು ಪ್ರಯೋಗಿಸಿ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರವನ್ನು ಮೊಟಕುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.