ಬಿಜೆಪಿ ಬಂಡೆಯಂತೆ ದೇಶದ ಸೇನೆಯ ಬೆಂಬಲಕ್ಕೆ ನಿಲ್ಲಲಿದೆ: ಉಧಾಂಪುರದಲ್ಲಿ ಶಾ
Team Udayavani, Apr 3, 2019, 5:47 PM IST
ಉಧಾಂಪುರ, ಜಮ್ಮು ಕಾಶ್ಮೀರ : ‘ಜಮ್ಮು ಕಾಶ್ಮೀರದಲ್ಲಿನ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯಿದೆಯನ್ನು ಯಾರೂ ಕೂಡ ದುರ್ಬಲಗೊಳಿಸಲು ಬಿಜೆಪಿ ಬಿಡದು; ಅದು ಬಂಡೆಯಂತೆ ಭದ್ರತಾ ಪಡೆಗಳ ಬೆಂಬಲಕ್ಕೆ ಸದಾ ಕಾಲ ನಿಲ್ಲಲಿದೆ’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಉಧಾಂಪುರ ರಾಲಿಯಲ್ಲಿ ಗುಡುಗಿದ್ದಾರೆ.
‘ಕಾಂಗ್ರೆಸ್ ಪಕ್ಷ ತಾನು ಗೆದ್ದು ಬಂದರೆ ಜಮ್ಮು ಕಾಶ್ಮೀರದಲ್ಲಿ ಪ್ರಕೃತ ಚಾಲ್ತಿಯಲ್ಲಿರುವ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯಿದೆಯನ್ನು ತೆಗೆದು ಹಾಕಲಿದೆ ಮತ್ತು ಜಮ್ಮು ಕಾಶ್ಮೀರದ ಸಾಂವಿಧಾನಿಕ ಸ್ಥಾನಮಾನಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಲಿದೆ’ ಎಂಬ ಭರವಸೆಯನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದೆ.
ಇದನ್ನು ಕಟುವಾಗಿ ಟೀಕಿಸಿರುವ ಅಮಿತ್ ಶಾ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ಅದರ ನಾಯಕರಿಗೆ ಈ ರೀತಿಯ ಆಶ್ವಾಸನೆಗಳನ್ನು ನೀಡುವುದಕ್ಕೆ ನಾಚಿಕೆಯಾಗಬೇಕು; ಭಾರತೀಯ ಜನತಾ ಪಕ್ಷ ಜಮ್ಮು ಕಾಶ್ಮೀರದಲ್ಲಿನ ಎಎಫ್ಎಸ್ಪಿಎ ತೆಗೆದು ಹಾಕುವುದಕ್ಕೆ ಮತ್ತು ದೇಶದ್ರೋಹದ ಅಂಶವನ್ನು ಕೈಬಿಡುವುದಕ್ಕೆ ಎಂದೂ ಅವಕಾಶ ನೀಡದು ಎಂದು ಹೇಳಿದರು.
ಇದೇ ವೇಳೆ ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡಿದ ಶಾ, “ನಿಮ್ಮಿಂದ ಒಂದು ಬುಲೆಟ್ ನಮ್ಮತ್ತ ಹಾರಿ ಬಂದರೂ ನಾವು ನಿಮ್ಮ ಮೇಲೆ ಶೆಲ್ ದಾಳಿ ನಡೆಸುತ್ತೇವೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.