ಇದು ಕರ್ನಾಟಕ ರಾಜಕೀಯಕ್ಕೆ ಶುಭ ಸಂಕೇತ: ಅಮಿತ್ ಶಾ
Team Udayavani, Feb 14, 2023, 6:19 PM IST
ಹೊಸದಿಲ್ಲಿ: ಕರ್ನಾಟಕದಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ನಾನು ಅಲ್ಲಿನ ಜನರ ಭಾವನೆಗಳನ್ನು ನೋಡಿದ್ದೇನೆ ಮತ್ತು ಜನಸಾಮಾನ್ಯರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನು ಸಹ ನೋಡಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಹೇಳಿದರು.
ಸಂದರ್ಶನದಲ್ಲಿ ಮಾತನಾಡಿರುವ ಅವರು ನಾನು ಕರ್ನಾಟಕದಲ್ಲಿ ಕಳೆದೆರಡು ತಿಂಗಳಲ್ಲಿ ಐದು ಬಾರಿ ಹೋಗಿ ಬಂದೆ. ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿದ್ದೇನೆ, ಮೋದಿ ಜನಪ್ರಿಯತೆಯನ್ನು ಕಣ್ಣಾರೆ ಕಂಡಿದ್ದೇನೆ. ಅಲ್ಲಿ ತುಂಬಾ ದೊಡ್ಡ ಮಟ್ಟದ ಬಹುಮತವು ಬಿಜೆಪಿಗೆ ಸಿಗಲಿದೆ ಎಂದಿದ್ದಾರೆ.
ಇದನ್ನೂ ಓದಿ:ವನಿತಾ ಟಿ20 ವಿಶ್ವಕಪ್ ದೊಡ್ಡ ಅಂತರದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ
ನಾನು ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕಕ್ಕೆ ಹೋಗಿ ಬಂದಿದ್ದೇನೆ. ಮಂಡ್ಯಕ್ಕೂ ಹೋಗಿ ಬಂದಿದ್ದೇನೆ. ಅಲ್ಲಿ ಎಂದೂ ಆಗಿರದಂತಹ ದೊಡ್ಡ ಸಮಾವೇಶ ನಡೆದಿದೆ. ಮಂಡ್ಯದ ಜನತೆಯೂ ಪರಿವಾರವಾದಿ ಪಕ್ಷಗಳಿಂದ ದೂರವಾಗಿದ್ದಾರೆ. ಬಿಜೆಪಿಯ ಅಭಿವೃದ್ಧಿ ರಾಜಕೀಯವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕ ರಾಜಕೀಯಕ್ಕೆ ಶುಭ ಸಂಕೇತ ಎಂದು ಅಮಿತ್ ಶಾ ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಈ ಬಾರಿ ಪ್ರಚಂಡ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ.
BJP will form the government with a thumping majority in Karnataka.
I have seen people’s sentiments there and also the unparalleled popularity of PM @narendramodi Ji among the masses. pic.twitter.com/1LDJWb1Ncl— Amit Shah (@AmitShah) February 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.