DDC ಚುನಾವಣೆಯ ಪ್ರಚಾರದ ರ್ಯಾಲಿ ವೇಳೆ ಮಗುಚಿದ ದೋಣಿ
Team Udayavani, Dec 13, 2020, 8:36 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಡಿಡಿಸಿ ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಶ್ರೀನಗರದಲ್ಲಿರುವ ದಾಲ್ ಸರೋವರದಲ್ಲಿ ದೋಣಿ ಮಗುಚಿದ ಪರಿಣಾಮ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಹಲವು ಬಿಜೆಪಿ ಕಾರ್ಯಕರ್ತರು ಹಾಗೂ ಪತ್ರಿಕಾ ಪ್ರತಿನಿಧಿಗಳು ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ,
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಬಿಜೆಪಿ ವತಿಯಿಂದ ಜಿಲ್ಲಾ ಅಭಿವೃದ್ಧಿ ಮಡಳಿ (DDC) ಚುನಾವಣೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ದಾಲ್ ಲೇಕ್ ರ್ಯಾಲಿ ಕೈಗೊಂಡಿದ್ದರು.
ಇದನ್ನೂ ಓದಿ:ರಸ್ತೆ ಮಧ್ಯೆ ನಿಂತ ಸಲಗ: ಟ್ರಾಫಿಕ್ ಜಾಮ್
ದೋಣಿಯಲ್ಲಿ ಬಿ ಜೆ ಪಿ ಪಕ್ಟದ ಕಾರ್ಯಕರ್ತರು ಹಾಗೂ ನಾಯಕರುಗಳನ್ನು ಒಳಗೊಂಡಂತೆ ಪತ್ರಿಕಾ ಪ್ರತಿನಿಧಿಗಳು ಪ್ರಯಾಣಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಿಯರು, SDRF ಸಿಬ್ಬಂದಿ ಸೇರಿದಂತೆ ಪೊಲೀಸರು ಆಗಮಿಸಿ ನೀರಿನಲ್ಲಿ ಮುಳುಗಿರುವವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ .
ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ದಡ ತಲುಪುವ ವೇಳೆ ದೋಣಿ ಮಗುಚಿದ ಪರಿಣಾಮ ಈ ಘಟನೆ ನಡೆದಿದೆ. ದೋಣಿಯಲ್ಲಿ ಹಲವಾರು ಮಾಧ್ಯಮ ಮಿತ್ರರಿದ್ದರು , ಅದೃಷ್ಟವಶಾತ್ ಯಾರೊಬ್ಬರಿಗೂ ಯಾವುದೇ ಅಪಾಯವಾಗಿಲ್ಲ. ಮತ್ತು ನಾವು ಕೈಗೊಂಡ ದಾಲ್ ಲೇಕ್ ರ್ಯಾಲಿ ಯಶಸ್ವಿಯಾಗಿದೆ ಎಂದು ಶಹನವಾಜ್ ಹುಸೇನ್ ಮಾದ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.