ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ
Team Udayavani, Jul 31, 2021, 9:01 PM IST
ನವದೆಹಲಿ: ಕೇಂದ್ರ ಸಚಿವ ಸ್ಥಾನ ಕಳೆದುಕೊಂಡ ಕಾರಣದಿಂದ ಬಿಜೆಪಿ ನಾಯಕ ಬಾಬುಲ್ ಸುಪ್ರಿಯೋ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜಕೀಯದ ನಂಟು ಹೊಂದದ ವ್ಯಕ್ತಿಯೂ ಸಹ ಸಾಮಾಜಿಕ ಕಾರ್ಯಗಳನ್ನು ಮಾಡಬಹುದು’ ಎಂದು ಬರೆದುಕೊಂಡಿದ್ದಾರೆ.
‘ನನ್ನ ತಂದೆ, ಪತ್ನಿ, ಮಗಳು ಮತ್ತು ಕೆಲವು ಆಪ್ತ ಸ್ನೇಹಿತರ ಮಾತುಗಳನ್ನು ಆಲಿಸಿದೆ. ಎಲ್ಲವನ್ನೂ ಆಲಿಸಿದ ನಂತರ, ಬೇರೆ ಯಾವುದೇ ಪಕ್ಷಕ್ಕೆ ಸೇರುವ ನಿರ್ಧಾರವನ್ನು ನಾನು ತೆಗೆದುಕೊಂಡಿಲ್ಲ. ನಾನು ಕಾಂಗ್ರೆಸ್, ಟಿಎಂಸಿ ಅಥವಾ ಸಿಪಿಎಂ ಪಕ್ಷಗಳನ್ನು ಸೇರುತ್ತಿಲ್ಲ. ಅವರೂ ಸಹ ನನ್ನನ್ನು ಕರೆದಿಲ್ಲ ಎಂದು ಖಚಿತಪಡಿಸುತ್ತಿದ್ದೇನೆ’ ಎಂಬುದಾಗಿ ಬಾಬುಲ್ ಸುಪ್ರಿಯೊ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯಗಳು ಇರುವುದಾಗಿಯೂ ಸುಪ್ರಿಯೊ ತಿಳಿಸಿದ್ದಾರೆ.ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ 2014ರಿಂದಲೇ ಸುಪ್ರಿಯೋ ಅವರು ಹಲವು ಖಾತೆಗಳನ್ನು ನಿರ್ವಹಿಸಿದ್ದರು. ಜುಲೈ ತಿಂಗಳ ಆರಂಭದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಪುನರ್ರಚನೆ ವೇಳೆ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.