ಆಕ್ಷೇಪದ ನಡುವೆಯೂ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ
Team Udayavani, Jun 24, 2024, 11:09 AM IST
ನವದೆಹಲಿ: ಪ್ರತಿಪಕ್ಷಗಳ ತೀವ್ರ ಆಕ್ಷೇಪದ ನಡುವೆಯೂ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುನ್ನ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಸೋಮವಾರ ಲೋಕಸಭೆ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್‌ಗೆ ಪ್ರಮಾಣ ವಚನ ಬೋಧಿಸಿದರು. ಇಂದು ಆರಂಭವಾಗಲಿರುವ ಲೋಕಸಭೆ ಅಧಿವೇಶನದ ಅಧ್ಯಕ್ಷತೆ ವಹಿಸಲು ಮಹತಾಬ್ ಸಜ್ಜಾಗಿದ್ದು, ಹೊಸದಾಗಿ ಚುನಾಯಿತ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಉಸ್ತುವಾರಿ ವಹಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.
ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಆಯ್ಕೆಗೆ ಈಗಾಗಲೇ ವಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗಿದ್ದು ಇದರ ನಡುವೆ ಮಹತಾಬ್ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಇತ್ತ ಲೋಕಸಭಾ ಹಂಗಾಮಿ ಸ್ಪೀಕರ್ ಆಯ್ಕೆಯಾಗುತ್ತಿದ್ದಂತೆ ಸದನ ತೊರೆದ ವಿಪಕ್ಷ ನಾಯಕರು ಸ್ಪೀಕರ್ ಆಯ್ಕೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ದೆಹಲಿಯ ಗಾಂಧಿ ಪ್ರತಿಮೆ ಎದುರು ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Bomb threat; ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ವಿಮಾನಯಾನ ರದ್ದು
7 terms BJP MP Bhartruhari Mahtab takes oath as pro-tem Speaker of 18th Lok Sabha. pic.twitter.com/bE4UAOVT2P
— News Arena India (@NewsArenaIndia) June 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.