ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Team Udayavani, May 1, 2024, 10:47 AM IST
Photo: India Today
ದೆಹಲಿ: ದೆಹಲಿ ಮತ್ತು ನೋಯ್ಡಾದಲ್ಲಿ 50 ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ (ಮೇ.1 ರಂದು) ಬೆಳಿಗ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು,ವಿದ್ಯಾರ್ಥಿಗಳು ಸೇರಿದಂತೆ ಶಾಲೆಯಲ್ಲಿದ್ದ ಎಲ್ಲರನ್ನೂ ಮನೆಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.
ದೆಹಲಿ ಪಬ್ಲಿಕ್ ಸ್ಕೂಲ್‌ನ (ಡಿಪಿಎಸ್) ದ್ವಾರಕಾ ಮತ್ತು ವಸಂತ್ ಕುಂಜ್ ಘಟಕಗಳು, ಪೂರ್ವ ಮಯೂರ್ ವಿಹಾರ್‌ನ ಮದರ್ ಮೇರಿ ಸ್ಕೂಲ್, ಸಂಸ್ಕೃತ್ ಶಾಲೆ, ಪುಷ್ಪ್ ವಿಹಾರ್‌ನ ಅಮಿಟಿ ಸ್ಕೂಲ್ ಮತ್ತು ನೈಋತ್ಯ ದೆಹಲಿಯ ಡಿಎವಿ ಶಾಲೆಗೆ ಬಾಂಬ್ ಬೆದರಿಕೆ ಬಂದಿತ್ತು. .ಡಿಪಿಎಸ್ ನೋಯ್ಡಾಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಾಂಬ್ ಬೆದರಿಕೆ ಬಂದ ಕೂಡಲೇ ಎಲ್ಲಾ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಡಿಪಿಎಸ್ ದ್ವಾರಕಾ ಶಾಲೆಗೆ ಇಮೇಲ್ ಮೂಲಕ ಬೆಳಿಗ್ಗೆ 6 ಗಂಟೆಗೆ ಬಾಂಬ್ ಬೆದರಿಕೆ ಬಂದಿದೆ. ಆ ಬಳಿಕ ದೆಹಲಿ ಪೊಲೀಸ್ ಸಿಬ್ಬಂದಿಗಳು, ಅಗ್ನಿಶಾಮಕ ಸಿಬಂದಿಗಳು ಹಾಗೂ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.
ಪರಿಶೀಲನೆ ವೇಳೆ ಸ್ಥಳದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ, ಮದರ್ ಮೇರಿ ಶಾಲೆ, ಸಂಸ್ಕೃತ್ ಶಾಲೆ, ಅಮಿಟಿ ಶಾಲೆ ಮತ್ತು ಡಿಪಿಎಸ್ ನೋಯ್ಡಾದ ಕ್ಯಾಂಪಸ್‌ಗಳಲ್ಲಿಯೂ ಪರಿಶೀಲನೆ ನಡೆಸಲಾಗಿದೆ.
“ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಲ್ಲಿ ತಕ್ಷಣ ಎಲ್ಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುತ್ತಿದ್ದೇವೆ” ಎಂದು ಡಿಪಿಎಸ್ ನೋಯ್ಡಾದ ಪ್ರಾಂಶುಪಾಲರು ಹೇಳಿದ್ದಾರೆ.
ಇಮೇಲ್ ಬಂದ ಐಪಿ ವಿಳಾಸವು ದೇಶದ ಹೊರಗಿನದು ಎಂದು ತಿಳಿದು ಬಂದಿದ್ದು, ವಿಪಿಎನ್ ಮೂಲಕ ಐಪಿ ವಿಳಾಸವನ್ನು ಮರೆಮಾಚಬಹುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ಆರ್‌ಕೆ ಪುರಂನ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.