ಬಿಎಂಸಿ ಫಲಿತಾಂಶ; ಠಾಕ್ರೆಗೆ ಕೈಕೊಟ್ಟ ಅದೃಷ್ಟ, ಬಿಜೆಪಿ ಕಿಂಗ್ ಮೇಕರ್
Team Udayavani, Feb 23, 2017, 2:04 PM IST
ಮುಂಬೈ: ತೀವ್ರ ಕುತೂಹಲ ಕೆರಳಿಸಿರುವ ಹಾಗೂ ಬಿಜೆಪಿ ಮತ್ತು ಶಿವಸೇನೆಗೆ ಪ್ರತಿಷ್ಠೆಯ ಕಣವಾಗಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದೆ , ಶಿವಸೇನೆ 84 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಬಿಜೆಪಿ 81 ಸ್ಥಾನಗಳಲ್ಲಿ ಗೆಲುವಿನ ನಗು ಬೀರುವ ಮೂಲಕ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದೆ.
227 ಸದಸ್ಯ ಬಲ ಹೊಂದಿರುವ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 227ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದ್ದು, ಆ ಹಿನ್ನೆಲೆಯಲ್ಲಿ ಶಿವಸೇನೆ ಮೇಲುಗೈ ಸಾಧಿಸಿದಂತಾಗಿದ್ದರು ಕೂಡಾ ಬಿಎಂಸಿ ಅಧಿಕಾರದ ಗದ್ದುಗೆ ಹಿಡಿಯಲು ಬೇಕಾದ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.
ಕಾಂಗ್ರೆಸ್ ಪಕ್ಷ 31 ಸ್ಥಾನ, ಎಂಎನ್ ಎಸ್ 7 ಸ್ಥಾನ, ಎನ್ ಸಿಪಿ 9 ಸ್ಥಾನಗಳಲ್ಲಿ ಜಯ ಗಳಿಸಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್, ಎನ್ ಸಿಪಿ ಮುಖಭಂಗ ಅನುಭವಿಸಿದೆ.
ಬಿಜೆಪಿ ಜೊತೆ ಮೈತ್ರಿಯೊಂದಿಗೆ ಕಣಕ್ಕಿಳಿಯುವ ಮೂಲಕ ಶಿವಸೇನೆ ಕಳೆದ 20 ವರ್ಷಗಳಿಂದ ಮುಂಬೈ ಮಹಾನಗರ ಪಾಲಿಕೆಯನ್ನು ಆಳುತ್ತಿತ್ತು. ಆದರೆ ಈ ಬಾರಿ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಶಿವಸೇನೆ ಮೈತ್ರಿ ಬಿಟ್ಟು ಏಕಾಂಗಿಯಾಗಿ ಸ್ಪರ್ಧಿಸಿತ್ತು.
ಪುಣೆ, ನಾಗಪುರ್, ನಾಸಿಕ್ ಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ, ಬೃಹನ್ಮುಂಬೈ ಪ್ರದೇಶದಲ್ಲಿ ಶಿವಸೇನೆ ಮುಂಚೂಣಿಯಲ್ಲಿದ್ದರೆ, ಥಾಣೆಯಲ್ಲಿ ಎನ್ ಸಿಪಿ ಮುನ್ನಡೆ ಸಾಧಿಸಿದೆ.
ಬಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಯ ಹೊಣೆ ಹೊತ್ತ ಮುಂಬೈ ಕಾಂಗ್ರೆಸ್ ವರಿಷ್ಠ ಸಂಜಯ್ ನಿರುಪಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2012ರಲ್ಲಿ ಶಿವಸೇನೆ 75 ಸ್ಥಾನ ಪಡೆದಿತ್ತು, 2017ರ ಚುನಾವಣೆಯಲ್ಲಿ ಶಿವಸೇನೆ 84 ಸ್ಥಾನ ಪಡೆದರು ಏಕಾಂಗಿ ಹೋರಾಟದಿಂದ ಅಧಿಕಾರದ ಗದ್ದುಗೆ ಏರುವ ಉದ್ಧವ್ ಠಾಕ್ರೆ ಕನಸು ನನಸಾಗಲಿಲ್ಲ.
2012ರಲ್ಲಿ ಬಿಜೆಪಿ 31 ಸ್ಥಾನಗಳಲ್ಲಿ ಜಯಗಳಿಸಿತ್ತು, ಆದರೆ ಈ ಬಾರಿ ಬಿಜೆಪಿ 81 ಸ್ಥಾನ ಪಡೆಯುವ ಮೂಲಕ ಮತ್ತಷ್ಟು ಬಲಿಷ್ಠವಾಗಿದೆ.
ಶಿವಸೇನೆಗೆ ಫಡ್ನವೀಸ್ ತಿರುಗೇಟು:
ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಎಲ್ಲಾ ವಾರ್ಡ್ ಗಳಲ್ಲಿಯೂ ಬಿಜೆಪಿ ಕಠಿಣ ಸವಾಲನ್ನು ನೀಡಿದೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಶಿವಸೇನೆಗೆ ತಿರುಗೇಟು ನೀಡಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿಯೂ ಬಿಜೆಪಿ ಅತ್ಯುತ್ತಮ ಫಲಿತಾಂಶ ಪಡೆದಿದೆ. ಮುಂಬೈ ಮತ್ತು ಥಾಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿದ್ದು, ಉಳಿದ ಎಲ್ಲೆಡೆ ಬಿಜೆಪಿಗೆ ಭರ್ಜರಿ ಮತ ಬಿದ್ದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.