West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
Team Udayavani, Sep 19, 2024, 10:08 AM IST
ಕೋಲ್ಕತ್ತಾ: ಬಂಗಾಳದ ಬಿರ್‌ಭೂಮ್‌ನಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ಮಾಡಲು ಸ್ಪೀಡ್ ಬೋಟ್‌ನಲ್ಲಿ ಹೋಗುತ್ತಿದ್ದ ಅಧಿಕಾರಿಗಳ ದೋಣಿಯೊಂದು ಪಲ್ಟಿಯಾಗಿರುವ ಘಟನೆ ಬುಧವಾರ ಸಂಭವಿಸಿದೆ.
ಘಟನೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೊರತುಪಡಿಸಿ ಉಳಿದವರೆಲ್ಲರೂ ನದಿಗೆ ಬಿದ್ದಿದ್ದಾರೆ. ಇವರಲ್ಲಿ ಇಬ್ಬರು ಸಂಸದರು, ಒಬ್ಬ ಶಾಸಕ, ಬಿರ್ಭೂಮ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಇತರ ಆಡಳಿತ ಅಧಿಕಾರಿಗಳು ಸೇರಿದ್ದಾರೆ. ಈ ವೇಳೆ ಓರ್ವ ಅಧಿಕಾರಿ ನಾತ್ತೆಯಾಗಿದ್ದು ಉಳಿದ 12 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ, ಕಾರ್ಯಾಚರಣೆ ನಡೆಸಿದ ಬಳಿಕ್ಕ ನಾಪತ್ತೆಯಾದ ಇನ್ನೋರ್ವ ಅಧಿಕಾರಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲಾಬ್‌ಪುರ್‌ನ ಟಿಎಂಸಿ ಶಾಸಕ ಅಭಿಜಿತ್ ಸಿಂಗ್, ಪಕ್ಷದ ಸಂಸದರು, ಅಸಿತ್ ಮಲ್ ಮತ್ತು ಶಮೀರುಲ್ ಇಸ್ಲಾಂ, ಬಿರ್‌ಭೂಮ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಧನ್ ರಾಯ್ ಮತ್ತು ಇತರ ಅಧಿಕಾರಿಗಳು ಬೋಟ್‌ನಲ್ಲಿ ಬೀರ್‌ಭಮ್‌ನ ಬಲರಾಮ್‌ಪುರ ಮತ್ತು ಲ್ಯಾಬ್‌ಪುರದ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಪ್ರವಾಹ ಪರಿಶೀಲನೆಗೆ ಬೋಟ್ ನಲ್ಲಿ ತೆರಳುತ್ತಿದ್ದ ಅಧಿಕಾರಿಗಳು ಯಾವುದೇ ಸುರಕ್ಷತಾ ಜಾಕೆಟ್ ಧರಿಸಿಲ್ಲ ಎನ್ನಲಾಗಿದೆ, ಬೋಟ್ ಪಲ್ಟಿಯಾಗುತ್ತಿದ್ದಂತೆ ಅಲ್ಲಿದ್ದ ಸ್ಥಳೀಯ ಈಜುಗಾರರು ನದಿಗೆ ದುಮುಕಿ ಅಧಿಕಾರಿಗಳನ್ನು ರಕ್ಷಣೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆಯಾಗುತ್ತಿದ್ದು ಪರಿಣಾಮ ಜಲಾಶಯಗಳು ತುಂಬಿದ್ದರಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಕ್ಕೆ ಬಿಟ್ಟ ಪರಿಣಾಮ ಬಿರ್ಭುಮ್, ಬಂಕುರಾ, ಹೌರಾ, ಹೂಗ್ಲಿ, ಉತ್ತರ ಮತ್ತು ದಕ್ಷಿಣ 24 ಪರಗಣಗಳು, ಪುರ್ಬಾ ಮತ್ತು ಪಶ್ಚಿಮ ಮೇದಿನಿಪುರ್, ಪಶ್ಚಿಮ ಬರ್ಧಮಾನ್ ಜಿಲ್ಲೆಗಳು ಜಲಾವೃತವಾಗಿವೆ ಎಂದು ಹೇಳಲಾಗಿದೆ.
Birbhum, West Bengal: A boat carrying TMC MPs, the Birbhum District Magistrate, and others overturned during a flood assessment in Birbhum, West Bengal. No one was wearing life jackets, but all were rescued by villagers. The inspection was ordered by CM Mamata Banerjee. pic.twitter.com/UqXht20jui
— IANS (@ians_india) September 19, 2024
ಈ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಬೋಟ್ ಮೂಲಕ ತೆರಳಿದೆ ಈ ವೇಳೆ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.