ನದಿಗೆ ಬಿದ್ದ ನಾಲ್ಕು ದಿನಗಳ ಅನಂತರ ಮಹಿಳೆಯ ಶವ ಪತ್ತೆ
Team Udayavani, Aug 25, 2020, 3:56 PM IST
ಪಾಲ್ಗಾರ್ (ಮಹಾರಾಷ್ಟ್ರ): ಸುಮಾರು ನಾಲ್ಕು ದಿನಗಳ ಹಿಂದೆ ಪ್ರವಾಹದಿಂದ ಕೂಡಿದ ನದಿಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದ ಪಾಲ್ಗಾರ್ ಜಿಲ್ಲೆಯ 58ರ ಹರೆಯದ ಮಹಿಳೆಯ ಶವ ರವಿವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ವತ್ಸಲಾ ಇಬಾದ್ ಎಂದು ಗುರುತಿಸಲಾಗಿದೆ. ಈಕೆ ಆ.19 ರಂದು ಆಡುಗಳನ್ನು ಮೇಯಿಸಲು ಮನೆಯಿಂದ ಹೊರಗೆ ಹೋಗಿದ್ದಳು, ಆದರೆ ನಂತರ ನಾಪತ್ತೆಯಾಗಿದ್ದಳು. ಕೊಕ್ನೆರೆ ಗ್ರಾಮದ ಮೀನುಗಾರರು ಸೂರ್ಯ ನದಿಯ ದಡದಲ್ಲಿ ಮಹಿಳೆಯ ಶವವನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೇಲ್ನೋಟದಲ್ಲಿ ವತ್ಸಲಾ ಇಬಾದ್ ಆಕಸ್ಮಿಕವಾಗಿ ನದಿಗೆ ಬಿದ್ದು ಭಾರಿ ಮಳೆಯಿಂದಾಗಿ ನೀರಿನ ಪ್ರವಾಹದಲ್ಲಿ ಕೊಚ್ಚಿ ಹೋಗಿರುವಂತೆ ತೋರಿಬರುತ್ತದೆ. ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.