ಅಪಹರಣಕ್ಕೊಳಗಾದ ಚಿನ್ನದ ವ್ಯಾಪಾರಿಯ ಶವ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
Team Udayavani, Nov 6, 2022, 9:59 AM IST
ಬಿಹಾರ : ಬಿಹಾರದ ಅರ್ರಾದಲ್ಲಿ ಅಪಹರಣಕಾರರಿಂದ ಅಪಹರಣಕ್ಕೊಳಗಾಗಿದ್ದ ಚಿನ್ನದ ವ್ಯಾಪಾರಿಯ ಮೃತದೇಹವು ನದಿಯೊಂದರಲ್ಲಿ ಪತ್ತೆಯಾಗಿದೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.
ಚಿನ್ನದ ವ್ಯಾಪಾರಿಯನ್ನು ಹರಿಜಿ ಗುಪ್ತಾ ಎಂದು ಗುರುತಿಸಲಾಗಿದ್ದು ಬುಧವಾರ ಗುಪ್ತಾ ಅವರಿಗೆ ಕುಟುಂಬಸ್ಥರು ಕರೆ ಮಾಡಿದ ಸಂದರ್ಭ ಕರೆ ಸ್ವೀಕರಿಸಲಿಲ್ಲ, ಆಲದೆ ಮನೆಗೂ ಬಂದಿರಲಿಲ್ಲ ಇದರಿಂದ ಸಂಶಯಗೊಂಡ ಕುಟುಂಬದವರು ಪೊಲೀಸ್ ಠಾಣೆಗೆ ಅಪಹರಣವಾಗಿರುವ ಕುರಿತು ದೂರು ನೀಡಿದ್ದಾರೆ.
ಘಟನೆ ಕುರಿತು ಪೊಲೀಸರು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸಿ ಶನಿವಾರ ಗುಪ್ತಾ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ನದಿಯೊಂದರಲ್ಲಿ ಪತ್ತೆಯಾಗಿದೆ.
ಅಪಹರಣ ಮಾಡಿದ ತಂಡ ವ್ಯಕ್ತಿಯನ್ನು ಕೊಲೆ ಮಾಡಿ ನದಿಗೆಸೆದಿರಬಹುದು ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಹಿಮಾಂಶು ಶನಿವಾರ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹರಿಜಿ ಗುಪ್ತಾ ಬಿಹಾರದ ಅರ್ರಾ ನಿವಾಸಿಯಾಗಿದ್ದು, ಅವರು ಅರ್ರಾದಲ್ಲಿ ಮೂರು ಆಭರಣ ಅಂಗಡಿಗಳನ್ನು ಮತ್ತು ಪಾಟ್ನಾದಲ್ಲಿ ಎರಡು ಆಭರಣ ಅಂಗಡಿಗಳನ್ನು ಹೊಂದಿದ್ದರು. ಅಲ್ಲದೆ ಅರಾಹ್ ಬೈಪಾಸ್ ರಸ್ತೆಯಲ್ಲಿ ಮಾರುಕಟ್ಟೆಯನ್ನು ಹೊಂದಿದ್ದರು, ಅಲ್ಲಿ ಹಲವಾರು ಅಂಗಡಿಗಳನ್ನು ನಡೆಸುತಿದ್ದರು ಎನ್ನಲಾಗಿದೆ.
ಇದನ್ನೂ ಓದಿ : ಇಂಡಿಯನ್ ಡಿಜಿಟಲ್ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.