ಮಾಸ್ಕೋದಿಂದ ದಿಲ್ಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ; ಏರ್ಪೋರ್ಟ್ ನಲ್ಲಿ ಬಿಗು ಭದ್ರತೆ
Team Udayavani, Oct 14, 2022, 11:02 AM IST
ಹೊಸದಿಲ್ಲಿ: ಮಾಸ್ಕೋದಿಂದ ದಿಲ್ಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಎಚ್ಚರಿಕೆಯ ಇಮೇಲ್ ಗುರುವಾರ ರಾತ್ರಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆದರಿಕೆ ಮೇಲ್ ಬಂದ ನಂತರ, ಭದ್ರತಾ ಏಜೆನ್ಸಿಗಳನ್ನು ಅಲರ್ಟ್ ಮಾಡಲಾಗಿದೆ ಮತ್ತು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾಸ್ಕೋದಿಂದ ಬಂದ ವಿಮಾನವನ್ನು ಪರಿಶೀಲಿಸಲಾಗಿದ್ದು, ಇಲ್ಲಿಯವರೆಗೆ ಏನೂ ಕಂಡುಬಂದಿಲ್ಲ. ಆದರೂ ವಿಮಾನವನ್ನು ಪ್ರತ್ಯೇಕಿಸಿ ಇಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಾಸ್ಕೋದಿಂದ ಹೊರಟ ವಿಮಾನವು 3:20 ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಒಟ್ಟು 386 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ವಿಮಾನದಿಂದ ಕೆಳಗಿಳಿಸಲಾಗಿದೆ.
ಇದನ್ನೂ ಓದಿ:ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ
“ಇಂದು ರಾತ್ರಿ 3:20 ಕ್ಕೆ ಮಾಸ್ಕೋದಿಂದ ಟರ್ಮಿನಲ್ 3 ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ರಾತ್ರಿ 11:15 ಕ್ಕೆ ಕರೆ ಬಂದಿತು. ವಿಮಾನ ಸಂಖ್ಯೆ SU232 ರನ್ ವೇ 29 ರಲ್ಲಿ ಇಳಿಯಿತು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಈ ಹಿಂದೆಯೂ ಇಂತಹ ಘಟನೆ ನಡೆದಿತ್ತು. ಸೆಪ್ಟೆಂಬರ್ 10 ರಂದು, ಲಂಡನ್ ಗೆ ಹೋಗುವ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆಯನ್ನು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್ ಅಯ್ಯರ್
Zakir Hussain: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ನಿಧನ ಗೊಂದಲ: ಸ್ಪಷ್ಟನೆ ನೀಡಿದ ಕುಟುಂಬ
Tabla Maestro Alive: ತಬಲಾ ಮಾಂತ್ರಿಕ ಉಸ್ತಾದ್ ಜಾಕೀರ್ ಹುಸೇನ್ ಸ್ಥಿತಿ ಗಂಭೀರ
Kolktha: ಅಕ್ರಮ ಸಂಬಂಧ ಒಪ್ಪದ್ದಕ್ಕೆ ಅತ್ತಿಗೆಯ 3 ಪೀಸ್ ಮಾಡಿದ!
Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ
MUST WATCH
ಹೊಸ ಸೇರ್ಪಡೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್ ಅಯ್ಯರ್
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.