ಕೋವಿಡ್ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್
ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ
Team Udayavani, Jan 22, 2022, 10:00 PM IST
ನವದೆಹಲಿ: ಮುನ್ನೆಚ್ಚರಿಕಾ ಡೋಸ್ ಸೇರಿದಂತೆ ಕೊರೊನಾ ಲಸಿಕೆ ಪಡೆಯಲು ಮುಂದಾಗಿರುವವರಿಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಯೊಂದನ್ನು ಹೊರಡಿಸಿದೆ.
ನಿಮಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಸಂಪೂರ್ಣ ಗುಣಮುಖರಾದ 3 ತಿಂಗಳ ಬಳಿಕವೇ ಕೋವಿಡ್ ಲಸಿಕೆಯನ್ನು (ಮುನ್ನೆಚ್ಚರಿಕೆ ಡೋಸ್ ಸೇರಿದಂತೆ) ಪಡೆಯಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಆರೋಗ್ಯ ಯೋಜನೆ (ಎನ್‌ಎಚ್‌ಎಂ) ಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಯೋಜನಾ ನಿರ್ದೇಶಕರಾದ ವಿಕಾಸ್ ಶೀಲ್ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ.
ಮುನ್ನೆಚ್ಚರಿಕಾ ಡೋಸ್‌ಗೆ ಅರ್ಹರಾಗಿರುವ ಫಲಾನುಭವಿಗಳಿಗೆ ಕೊರೊನಾ ಸೋಂಕು ತಗುಲಿದ್ದರೆ, ಲಸಿಕೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಕಾಸ್ ಶೀಲ್ ಅವರು ಪತ್ರ ಮುಖೇನ ಸ್ಪಷ್ಟನೆ ನೀಡಿದ್ದು, ಸೋಂಕು ತಗುಲಿದವರು 3 ತಿಂಗಳ ನಂತರ ಲಸಿಕೆ ಪಡೆಯುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ:ಎಟಿಎಸ್ ಸ್ಥಾಪಿಸಿದ ಐಪಿಎಸ್ ಅಧಿಕಾರಿ ಅಫ್ತಾಬ್ ಅಹ್ಮದ್ ನಿಧನ
237 ದಿನಗಳಿಗೆ ಗರಿಷ್ಠ:
ದೇಶದಲ್ಲಿ ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ 3,37,704 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 488 ಮಂದಿ ಅಸುನೀಗಿದ್ದಾರೆ. ದೇಶದಲ್ಲಿ 237 ದಿನಗಳಿಗೆ ಹೋಲಿಕೆ ಮಾಡಿದರೆ, 21,13,365ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.93.31 ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.