ದಿಲ್ಲಿ : ಹೊಸ ವರ್ಷದ ಗುಂಡಿಗೆ ಬಾಲಕ ಬಲಿ, ಇನ್ನೋರ್ವ ಗಂಭೀರ
Team Udayavani, Jan 1, 2019, 6:03 AM IST
ಹೊಸದಿಲ್ಲಿ : ಈಶಾನ್ಯ ದಿಲ್ಲಿಯ ಉಸ್ಮಾನ್‌ಪುರ ಪ್ರದೇಶದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮೋಲ್ಲಾಸದಲ್ಲಿ ಹಾರಿಸಲಾದ ಗುಂಡಿಗೆ ಎಂಟು ವರ್ಷ ಪ್ರಾಯದ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಈ ದುರ್ಘಟನೆ ಸಂಭವಿಸಿತು. ಆಸ್ಪತ್ರೆ ಅಧಿಕಾರಿಗಳು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರು. ಬಾಲಕನ ಮನೆ ಪಕ್ಕದಲ್ಲೇ ಈ ಘಟನೆ ನಡೆದಿದೆ.
ಇನ್ನೊಂದು ಘಟನೆಯಲ್ಲಿ 12 ವರ್ಷ ಪ್ರಾಯದ ಬಾಲಕನಿಗೆ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಹಾರಿಸಲಾದ ಗುಂಡೇಟು ತಗಲಿ ಆತ ಗಂಭೀರವಾಗಿ ಗಾಯಗೊಂಡಿರುವುದು ತಿಳಿದು ಬಂದಿದೆ.
ಬಾಲಕ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ. ದಿಲ್ಲಿಯ ವೆಲ್‌ಕಂ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…