16 ತಾಸುಗಳ ಕಾರ್ಯಾಚರಣೆ: ಬೋರ್ ವೆಲ್‌ಗೆ ಬಿದ್ದಿದ್ದ ಬಾಲಕನ ರಕ್ಷಣೆ
Team Udayavani, Feb 21, 2019, 5:55 AM IST
ಪುಣೆ : ಜಿಲ್ಲೆಯ ಅಂಬೇಗಾಂವ್ ತೆಹಶೀಲ್‌ನ ಗ್ರಾಮವೊಂದರಲ್ಲಿ 200 ಅಡಿ ಆಳದ ಬೋರ್ ವೆಲ್ ಗೆ ಬಿದ್ದಿದ್ದ ಆರು ವರ್ಷದ ಬಾಲಕನನ್ನು ಹದಿನಾರು ತಾಸುಗಳ ಸುದೀರ್ಘ ಕಾರ್ಯಾಚರಣೆಯಲ್ಲಿ ಮೇಲೆತ್ತಿ ಪಾರುಗೊಳಿಸಲಾಗಿದೆ.
ಬಾಲಕನು ರಸ್ತೆ ನಿರ್ಮಾಣ ಕಾರ್ಮಿಕರೊಬ್ಬರ ಪುತ್ರ ಎಂದು ತಿಳಿದು ಬಂದಿದೆ. ಬಾಲಕನನ್ನು ಮೇಲಕ್ಕೆತ್ತಿ ರಕ್ಷಿಸುವ ಕಾರ್ಯಾಚರಣೆಯು ನಿನ್ನೆ ಬುಧವಾರ ಸಂಜೆ ಆರಂಭಗೊಂಡಿತ್ತು. ಎನ್‌ಡಿಆರ್‌ಎಫ್ ಈ ಕಾರ್ಯಾಚರಣೆಯನ್ನು ಕೈಗೊಂಡಿತ್ತು.
ಬಾಲಕನು ಬುಧವಾರ ಸಂಜೆ 4.45ರ ಸುಮಾರಿಗೆ ಬೋರ್ ವೆಲ್ ಪಕ್ಕದಲ್ಲೇ ಆಡಿಕೊಂಡಿದ್ದಾಗ ಆಕಸ್ಮಿಕವಾಗಿ ಬಾಯಿ ತೆರೆದುಕೊಂಡಿದ್ದ ಬೋರ್ ವೆಲ್ ಗೆ ಬಿದ್ದಿದ್ದ. ಆ ಸಂದರ್ಭದಲ್ಲಿ ಆತನ ತಂದೆ ರಸ್ತೆ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು. ಪಾರುಗೊಳಿಸಲ್ಪಟ್ಟ ಬಾಲಕನು ಆರೋಗ್ಯದಿಂದಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.