Delhi Excise Policy Case: ಬಿಆರ್ ಎಸ್ ನಾಯಕಿ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ
Team Udayavani, Mar 26, 2024, 5:32 PM IST
ಹೊಸದಿಲ್ಲಿ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ( ಬಿಆರ್ಎಸ್ ) ನಾಯಕಿ ಕೆ.ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ. ಮಾ. 16 ರಂದು 7 ದಿನಗಳ ಇಡಿ ಕಸ್ಟಡಿಗೆ ಕವಿತಾ ಅವರನ್ನು ಒಪ್ಪಿಸಲಾಗಿತ್ತು. ಕಳೆದ ಶನಿವಾರ ಅದನ್ನು ಮೂರು ದಿನಗಳವರೆಗೆ ವಿಸ್ತರಿಸಲಾಗಿತ್ತು.
ವಿಚಾರಣೆಯ ಸಂದರ್ಭದಲ್ಲಿ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡುವಂತೆ ಕವಿತಾ ಪರ ವಕೀಲ ನಿತೇಶ್ ರಾಣಾ ಕೋರಿದರು.
ದೆಹಲಿಯ ವಿಚಾರಣಾ ನ್ಯಾಯಾಲಯ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಏಪ್ರಿಲ್ 1 ರಂದು ವಿಚಾರಣೆ ನಡೆಸಲಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.