ಬಿಜೆಪಿ ಸೋಲಿಸಲು ಪಣ: ಇದೇ ಮೊದಲ ಬಾರಿಗೆ ಬಿಆರ್‌ಎಸ್‌ ಮೆಗಾ ಸಮಾವೇಶ

ತೆಲಂಗಾಣದ ಖಮ್ಮಾಮ್‌ನಲ್ಲಿ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನ

Team Udayavani, Jan 19, 2023, 7:15 AM IST

ಬಿಜೆಪಿ ಸೋಲಿಸಲು ಪಣ: ಇದೇ ಮೊದಲ ಬಾರಿಗೆ ಬಿಆರ್‌ಎಸ್‌ ಮೆಗಾ ಸಮಾವೇಶ

ಖಮ್ಮಾಮ್‌: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ನೇತೃತ್ವದ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌)ಯ ಮೆಗಾ ಸಮಾವೇಶ ಬುಧವಾರ ಖಮ್ಮಾಮ್‌ನಲ್ಲಿ ನಡೆದಿದೆ. ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಈ ಸಭೆಯಲ್ಲಿ ಪಾಲ್ಗೊಂಡು, ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿವೆ.

ಇದೇ ಮೊದಲ ಬಾರಿಗೆ ಇಂಥದ್ದೊಂದು ಸಭೆ ನಡೆದಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೂಗೆಯುವ ಶಪಥ ಮಾಡಲಾಗಿದೆ. ಜತೆಗೆ, 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಆರ್‌ಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಅನ್ನದಾತರಿಗೆ ಉಚಿತ ವಿದ್ಯುತ್‌ ನೀಡಲಾಗುವುದು. ತೆಲಂಗಾಣ ರೈತ ಬಂಧು ಮಾದರಿಯ ಯೋಜನೆಗಳನ್ನು ರಾಷ್ಟ್ರವ್ಯಾಪಿ ಜಾರಿ ಮಾಡಲಾಗುವುದು. ಜತೆಗೆ, ಸಶಸ್ತ್ರ ಪಡೆಗಳಿಗೆ ಯೋಧರನ್ನು ನೇಮಕ ಮಾಡುವ ಅಗ್ನಿವೀರ ಯೋಜನೆಯನ್ನು ರದ್ದು ಮಾಡಲಾಗುವುದು ಎಂದು ಸಿಎಂ ಕೆಸಿಆರ್‌ ಘೋಷಿಸಿದ್ದಾರೆ.

ಒಂದೇ ಕಲ್ಲಿಗೆ ಎರಡು ಹಕ್ಕಿ:
ಬಿಆರ್‌ಎಸ್‌ ಸಮಾವೇಶದ ಮೂಲಕ ಸಿಎಂ ಕೆಸಿಆರ್‌ ಅವರು “ಒಂದೇ ಕಲ್ಲಿಗೆ ಎರಡು ಹಕ್ಕಿ’ಯನ್ನು ಉರುಳಿಸಿದ್ದಾರೆ. ಒಂದು ಕಡೆ ರಾಜ್ಯದಲ್ಲಿ ತಮ್ಮ ಪಕ್ಷದ ನೆಲೆಯನ್ನು ಗಟ್ಟಿಗೊಳಿಸುವ, ಆಡಳಿತವಿರೋಧಿ ಅಲೆಯನ್ನು ಹತ್ತಿಕ್ಕುವ ಯತ್ನ ನಡೆಸಿದರೆ, ಮತ್ತೊಂದೆಡೆ ರಾಷ್ಟ್ರ ರಾಜಕಾರಣ ಪ್ರವೇಶಿಸುವ ಆಸೆಗೂ ಜೀವ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಪಂಜಾಬ್‌ ಸಿಎಂ ಭಗವಂತ್‌ ಮಾನ್‌, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಸೇರಿದಂತೆ ಪ್ರತಿಪಕ್ಷಗಳ ಅನೇಕ ನಾಯಕರು ಪಾಲ್ಗೊಂಡಿದ್ದರು. ಇನ್ನು, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಬಿಆರ್‌ಎಸ್‌ಗೆ ಬೆಂಬಲ ಘೋಷಿಸಿದ್ದು, ಕರ್ನಾಟಕದಲ್ಲಿ “ಪಂಚರತ್ನ’ ಯಾತ್ರೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಬಿಆರ್‌ಎಸ್‌ ಸಮಾವೇಶಕ್ಕೆ ಗೈರಾಗಿದ್ದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಈ ಎಲ್ಲ ನಾಯಕರೂ ಯಾದಾದ್ರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಹೊಸ ಪ್ರತಿರೋಧಕ್ಕೆ ಕರೆ
ದೇಶದ ಪ್ರಜಾಪ್ರಭುತ್ವದ ಅಡಿಗಲ್ಲನ್ನೇ ಬಿಜೆಪಿ ಧ್ವಂಸಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, “ಸಂವಿಧಾನ, ಪ್ರಜಾಸತ್ತೆ ಮತ್ತು ಜಾತ್ಯತೀತತೆಯನ್ನು ರಕ್ಷಿಸಬೇಕೆಂದರೆ ಹೊಸ ಪ್ರತಿರೋಧ ಹುಟ್ಟಬೇಕು. ಜನರೇ ಒಗ್ಗಟ್ಟಾಗಿ ದೇಶವನ್ನು ವಿಭಜಿಸುವ ಕೋಮುವಾದಿ ಅಜೆಂಡಾದ ವಿರುದ್ಧ ನಿಲ್ಲಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಖಮ್ಮಾಮ್‌ ಎನ್ನುವುದು ಪ್ರತಿರೋಧದ ನೆಲ. ಇಲ್ಲೇ ಹೊಸ ಪ್ರತಿರೋಧವು ಆರಂಭವಾಗಲಿ, ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನಾವು ಯಾವ ಆದರ್ಶಗಳನ್ನು ರಕ್ಷಿಸಲು ತೋರಿದೆವೋ ಆ ಪ್ರತಿರೋಧ, ಜಾತ್ಯತೀತತೆ, ಪ್ರಜಾಸತ್ತೆ, ಸಂವಿಧಾನವನ್ನು ಹಾಗೂ ದೇಶವನ್ನು ರಕ್ಷಿಸುವ ಪ್ರತಿರೋಧ ಇಲ್ಲಿಂದಲೇ ಮೊಳಗಬೇಕು ಎಂದೂ ಪಿಣರಾಯಿ ಕರೆ ನೀಡಿದರು.

ಜೋಕ್‌ ಇನ್‌ ಇಂಡಿಯಾ
ಕೇಂದ್ರ ಸರ್ಕಾರವು “ಮೇಕ್‌ ಇನ್‌ ಇಂಡಿಯಾ’ ಎಂದು ಹೇಳುತ್ತಲೇ ಇದೆ. ಆದರೆ, ದೇಶದ ಪ್ರತಿ ಬೀದಿಯಲ್ಲೂ ಚೈನಾ ಬಜಾರ್‌ಗಳೇ ಕಾಣಿಸುತ್ತಿವೆ. ಹೀಗಾಗಿ ಮೇಕ್‌ ಇನ್‌ ಇಂಡಿಯಾ ಈಗ “ಜೋಕ್‌ ಇನ್‌ ಇಂಡಿಯಾ’ ಆಗಿದೆ ಎಂದು ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ವ್ಯಂಗ್ಯವಾಡಿದರು. ಅಂತಾರಾಜ್ಯ ಜಲ ವಿವಾದಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರಣ. ಎಲ್‌ಐಸಿ(ಭಾರತೀಯ ಜೀವ ವಿಮೆ)ಯಲ್ಲಿನ ಬಂಡವಾಳ ವಾಪಸಾತಿ ಪ್ರಕ್ರಿಯೆಯನ್ನು ನಾವೆಲ್ಲರೂ ವಿರೋಧಿಸುತ್ತೇನೆ ಎಂದೂ ಅವರು ಹೇಳಿದರು.

ಒಗ್ಗಟ್ಟಿನ ಅಗತ್ಯ ಹೆಚ್ಚಿದೆ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತು ಸೋಲಿಸಲು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಒಂದುಗೂಡಬೇಕಾದ ಅಗತ್ಯವಿದೆ ಎಂದು ಸಿಪಿಐ ನಾಯಕ ಡಿ. ರಾಜಾ ಹೇಳಿದರು. ತೆಲಂಗಾಣದ ಕ್ರಾಂತಿಕಾರಿ ನೆಲವಾದ ಖಮ್ಮಾಮ್‌ನಿಂದ ಇಂಥದ್ದೊಂದು ಸಂದೇಶ ರವಾನೆಯಾಗಬೇಕು. ದೇಶಕ್ಕೆ ಎದುರಾಗಿರುವ ಅಪಾಯ ಮತ್ತು ದೇಶವಾಸಿಗಳು ಎದುರಿಸುತ್ತಿರುವ ವಿಪತ್ತಿನ ಸ್ಥಿತಿಯನ್ನು ಇಲ್ಲಿ ಉಪಸ್ಥಿತಿಯಿರುವವರು ಮತ್ತು ಇಲ್ಲದವರು ಅರ್ಥ ಮಾಡಿಕೊಳ್ಳಬೇಕು ಎಂದೂ ಅವರು ಕರೆ ನೀಡಿದರು.

ಬಿಜೆಪಿ ಕೊನೇ ದಿನಗಳನ್ನು ಎಣಿಸುತ್ತಿದೆ
“ಲೋಕಸಭೆ ಚುನಾವಣೆಗೆ ಇನ್ನು 400 ದಿನಗಳಷ್ಟೇ ಬಾಕಿಯಿದೆ’ ಎಂಬ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ಬಿಜೆಪಿಯ ಕಾಲೆಳೆದ ಎಸ್‌ಪಿ ನಾಯಕ ಅಖಿಲೇಶ್ ಯಾದವ್‌, “ಆಡಳಿತಾರೂಢ ಬಿಜೆಪಿ ತನ್ನ ಕೊನೆಯ ದಿನಗಳನ್ನು ಎಣಿಸಲಾರಂಭಿಸಿದೆ. 400 ದಿನದ ಬಳಿಕ ಒಂದು ದಿನವೂ ಅದು ಅಧಿಕಾರದಲ್ಲಿ ಇರುವುದಿಲ್ಲ’ ಎಂದರು.

ಟಾಪ್ ನ್ಯೂಸ್

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.