ನಿರಾಶಾದಾಯಕ ಕಾರ್ಪೊರೇಟ್ ಫಲಿತಾಂಶ: ಸೆನ್ಸೆಕ್ಸ್ 22 ಅಂಕ ನಷ್ಟ
Team Udayavani, Jul 19, 2018, 4:59 PM IST
ಮುಂಬಯಿ : ಕಂಪೆನಿಗಳ ಜೂನ್ ತ್ತೈಮಾಸಿಕ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವ ಕಾರಣಕ್ಕೆ ನಿರಾಶೆಗೊಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರ ದಿನಪೂರ್ತಿ ಏರಿಳಿತಗಳನ್ನು ಕಂಡು 22.21 ಅಂಕಗಳ ನಷ್ಟದೊಂದಿಗೆ 36,351.23 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಡಾಲರ್ ಎದುರು ರೂಪಾಯಿ ಕುಸಿತ ನಿರಂತರವಾಗಿದ್ದು ಅದೀಗ 69 ರೂ. ದಾಟಿರುವುದು ಶೇರು ಮಾರುಕಟ್ಟೆಯ ಕಳವಳಕ್ಕೆ ಕಾರಣವಾಯಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 23.35 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,957.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,727 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 827 ಶೇರುಗಳು ಮುನ್ನಡೆ ಸಾಧಿಸಿದವು; 1,754 ಶೇರುಗಳು ಹಿನ್ನಡೆ ಕಂಡವು; 146 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.