ಹುಟ್ಟುಹಬ್ಬದ ದಿನದಂದೇ ಯೋಧ ಹಜ್ರಾ ಹುತಾತ್ಮ
Team Udayavani, Jan 4, 2018, 6:05 AM IST
ಜಮ್ಮು: ಭಾರತ-ಪಾಕಿಸ್ಥಾನ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ಥಾನದ ಪಡೆಗಳು ಬುಧವಾರ ಸಂಜೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಗಡಿಯಲ್ಲಿ ಕಾವಲು ಕಾಯುತ್ತಿದ್ದ ಭಾರತೀಯ ಯೋಧ ಆರ್ಪಿ ಹಜ್ರಾ (50) ತಮ್ಮ ಹುಟ್ಟುಹಬ್ಬದ ದಿನದಂದೇ ಬಲಿಯಾಗಿದ್ದಾರೆ.
ಜಮ್ಮು-ಕಾಶ್ಮೀರದ ಸಾಂಬಾ ಸೆಕ್ಟರ್ನಲ್ಲಿರುವ ಅಂತಾರಾಷ್ಟ್ರೀಯ ಗಡಿಯ ಬಳಿ ಸಂಜೆ 4 ಗಂಟೆ ಸುಮಾರಿಗೆ ಪಾಕಿಸ್ಥಾನ ಪಡೆಗಳು ಗುಂಡಿನ ದಾಳಿ ನಡೆಸಿವೆ. ತೀವ್ರವಾಗಿ ಗಾಯಗೊಂಡಿದ್ದ ಹಜ್ರಾ ಅವರನ್ನು ಸೇನಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ.
ಇವರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲದವರು. ಕಳೆದ 27 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ಪತ್ನಿ, ಒಬ್ಬ ಪುತ್ರಿ (21) ಹಾಗೂ ಪುತ್ರನನ್ನು (18) ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.