ಹರಾಮಿ ನಾಲಾದಲ್ಲಿ ಪಾಕಿಸ್ತಾನದ ಎರಡು ದೋಣಿಗಳು ಪತ್ತೆ
Team Udayavani, Aug 25, 2019, 5:07 AM IST
ಅಹಮದಾಬಾದ್: ಪಾಕಿಸ್ತಾನಕ್ಕೆ ಸೇರಿದ ಎರಡು ಮೀನುಗಾರಿಕಾ ದೋಣಿಗಳು ಗುಜರಾತ್‌ನ ಕಛ್ ಜಿಲ್ಲೆಯ ‘ಹರಾಮಿ ನಾಲಾ’ ಪ್ರದೇಶದಲ್ಲಿ ಪತ್ತೆಯಾಗಿವೆ. ಬಿಎಸ್‌ಎಫ್ ಯೋಧರು ಎಂದಿನಂತೆ ಕಛ್ ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅವುಗಳು ಪತ್ತೆಯಾಗಿದ್ದವು. ಸಂಶಯಕ್ಕೆ ಈಡಾಗುವಂಥ ಯಾವುದೇ ವಸ್ತುಗಳು ಈ ಬೋಟ್‌ಗಳಲ್ಲಿ ಸಿಕ್ಕಿಲ್ಲ.
ಇದಾದ ಬಳಿಕ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿರುಸಿನ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸರ್ ಕ್ರೀಕ್ ಪ್ರದೇಶದಲ್ಲಿರುವ ಪ್ರದೇಶವೇ ‘ಹರಾಮಿ ನಾಲಾ’. ಇಲ್ಲಿ ಯಾವತ್ತೂ ನೀರು ತುಂಬಿಕೊಂಡಿರುವ ಪ್ರದೇಶ. ಮೇ ತಿಂಗಳಲ್ಲಿ ಪಾಕಿಸ್ತಾನಕ್ಕೆ ಸೇರಿದ ಮೀನುಗಾರರ ಹಡಗನ್ನು ಬಿಎಸ್‌ಎಫ್ ವಶಪಡಿಸಿಕೊಂಡಿತ್ತು.
ಕರಾವಳಿಯಲ್ಲಿ ಹೈಅಲರ್ಟ್: ಇದೇ ವೇಳೆ ಕೇರಳದ ಕೊಚ್ಚಿಯಲ್ಲಿರುವ ನೌಕಾ ನೆಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಆರು ಮಂದಿ ಲಷ್ಕರ್ ಉಗ್ರರು ತಮಿಳುನಾಡಿಗೆ ಪ್ರವೇಶಿಸಿದ್ದಾರೆ ಎಂಬ ಕೇಂದ್ರ ಗುಪ್ತಚರ ಮೂಲಗಳ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳ ಹಾಗೂ ತಮಿಳುನಾಡಿನ ಸಮುದ್ರ ಹಾಗೂ ಕರಾವಳಿಯುದ್ದಕ್ಕೂ ನಿಗಾ ವಹಿಸಿರುವುದಾಗಿ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಅಲ್ಲದೆ ದೇಗುಲಗಳು, ಮಸೀದಿಗಳು ಹಾಗೂ ಚರ್ಚ್ ಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.