ಎಸ್‌ಪಿ ಜತೆಗೆ ಮೈತ್ರಿ ಮುರಿದ ಮಾಯಾವತಿ
Team Udayavani, Jun 25, 2019, 5:00 AM IST
ಲಕ್ನೋ: ಮುಂದೆ ಬರುವ ಎಲ್ಲ ಚುನಾವಣೆಗಳಲ್ಲೂ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಸೋಮವಾರ ಘೋಷಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ಜತೆಗೆ ಮಾಡಿಕೊಂಡಿದ್ದ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಕಾರ್ಯಕರ್ತರೊಂದಿಗೆ ಭಾನುವಾರವಷ್ಟೇ ಮಾಯಾ ಸಭೆ ನಡೆಸಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಸೋಮವಾರ ಮಾತನಾಡಿದ ಅವರು, ‘ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ದೇಶದ ಹಿತಾಸಕ್ತಿಯಿಂದ ನಾವು ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಘಟಬಂಧನದ ಧರ್ಮವನ್ನು ಪಾಲಿಸಿದೆವು. ಆದರೆ, ಚುನಾವಣೆ ಫಲಿತಾಂಶದ ಬಳಿಕ ಎಸ್‌ಪಿ ನಾಯಕರ ವರ್ತನೆಯು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿತು. ಭವಿಷ್ಯದಲ್ಲಿ ಬಿಜೆಪಿಯನ್ನು ನಾವು ಸೋಲಿಸಲು ಸಾಧ್ಯವೇ ಎಂಬ ಪ್ರಶ್ನೆಯೂ ಮೂಡಿತು. ಆದರೆ, ಅದು ಸಾಧ್ಯವಿಲ್ಲ ಎಂಬುದು ಅರಿವಾಯಿತು. ಹೀಗಾಗಿ, ಪಕ್ಷದ ಹಿತಾಸಕ್ತಿಯ ದೃಷ್ಟಿಯಿಂದ ಮುಂಬರುವ ಎಲ್ಲ ಸಣ್ಣ ಹಾಗೂ ದೊಡ್ಡ ಚುನಾವಣೆಗಳನ್ನು ನಾವು ಏಕಾಂಗಿಯಾಗಿ ಎದುರಿಸುತ್ತೇವೆ’ ಎಂದು ಹೇಳಿದ್ದಾರೆ. ಬಿಜೆಪಿ ಜೊತೆ ಕೈಜೋಡಿಸಿದ ಸಮಾಜವಾದಿ ಪಕ್ಷ ನನ್ನನ್ನು ತಾಜ್ ಕಾರಿಡಾರ್ ಕೇಸ್‌ನಲ್ಲಿ ಸಿಲುಕಿಸಿದರು. ಯಾದವೇತರ ಸಮಾಜದ ವಿರುದ್ಧ ಎಸ್‌ಪಿ ಕೆಲಸ ಮಾಡುತ್ತಿದ ಎಂದೂ ಆರೋಪಿಸಿದ್ದಾರೆ.
ಹೋರಾಟ ದುರ್ಬಲಗೊಳಿಸಿದ ಮಾಯಾ: ಮಾಯಾವತಿ ಮೈತ್ರಿ ಮುರಿಯುವ ಘೋಷಣೆ ಮಾಡಿದ ಬೆನ್ನಲ್ಲೇ ಟ್ವಿಟರ್‌ನಲ್ಲಿ ತಮ್ಮ ಅಸಮಾಧಾನ ಹೊರಹಾಕಿರುವ ಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮಾಶಂಕರ್ ವಿದ್ಯಾರ್ಥಿ, ‘ದಲಿತರು ಈಗ ಎಸ್‌ಪಿಯತ್ತ ಮುಖಮಾಡಿರುವ ಕಾರಣ, ಹತಾಶೆಯಿಂದ ಮಾಯಾ ಈ ರೀತಿಯ ಮಾತುಗಳನ್ನಾಡಿದ್ದಾರೆ. ಮೈತ್ರಿ ಮುರಿದುಕೊಳ್ಳುವ ಮೂಲಕ ಅವರು ಸಾಮಾಜಿಕ ನ್ಯಾಯದ ಹೋರಾಟವನ್ನು ದುರ್ಬಲಗೊಳಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.