ಕಾಂಗ್ರೆಸ್ ಜತೆ ಮೈತ್ರಿ ಇಲ್ಲ; BJP ಸೋಲಿಗೆ SP-BSP ಸಾಕು: ಮಾಯಾವತಿ
Team Udayavani, Mar 12, 2019, 12:17 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಆಳುವ ಬಿಜೆಪಿಯನ್ನು ಹಣಿಯುವುದಕ್ಕೆ ಬಿಎಸ್‌ಪಿ – ಎಸ್‌ಪಿ ಮೈತ್ರಿಯೇ ಸಾಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಹೇಳುವ ಮೂಲಕ ವಿಪಕ್ಷಗಳ ಮಹಾ ಮೈತ್ರಿ ಕೂಟ ರಚನೆಗೆ ಭಾರೀ ಹಿನ್ನಡೆ ಒದಗಿದಂತಾಗಿದೆ.
ಬಹುಜನ ಸಮಾಜ ಪಕ್ಷ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದು ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ.
ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಹೊರಡಿಸಿರುವ ಹೇಳಿಕೆಯಲ್ಲಿ, “ಬಹುಜನ ಸಮಾಜ ಪಕ್ಷ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ” ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗಿನ (ಎಸ್‌ಪಿ) ಚುನಾವಣಾ ಪೂರ್ವ ಮೈತ್ರಿಯು ಪರಸ್ಪರ ಗೌರವ ಮತ್ತು ಪ್ರಾಮಾಣಿಕ ಉದ್ದೇಶಗಳ ನೆಲೆಯಲ್ಲಿ ಆದುದಾಗಿದೆ. ಆಳುವ ಬಿಜೆಪಿಯನ್ನು ಸೋಲಿಸಲು, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ, ಎಸ್‌ಪಿ-ಬಿಎಸ್‌ಪಿ ಮೈತ್ರಿಯೊಂದೇ ಸಾಕು’ ಎಂದು ಮಾಯಾವತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.