ಬಿಎಸ್‌ವೈ ಗೋವಾ ಭೇಟಿ ರದ್ದು


Team Udayavani, Sep 17, 2019, 3:00 AM IST

Udayavani Kannada Newspaper

ಪಣಜಿ: ಮಹದಾಯಿ ನೀರು ಹಂಚಿಕೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಸಿಎಂ ಪ್ರಮೋದ ಸಾವಂತ್‌ ಹೇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೆ.16- 17ರಂದು ಗೋವಾ ಸಿಎಂ ಜತೆ ಸಮಯ ನಿಗ ದಿಪಡಿಸಿದ್ದನ್ನು ರದ್ದುಗೊಳಿಸಲಾಗಿದೆ. ಮಹದಾಯಿ ಸಮಸ್ಯೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಕುರಿತಂತೆ ಸಿಎಂ ಬಿಎಸ್‌ವೈ ಸಿದ್ಧತೆ ನಡೆಸಿದ್ದು, ಕೊನೇ ಕ್ಷಣದಲ್ಲಿ ಗೋವಾ ಸಿಎಂ ಹೇಳಿಕೆ ನಂತರ ಮಾತುಕತೆ ರದ್ದುಗೊಳಿಸಲಾಗಿದೆ.

ಮಹದಾಯಿ ನೀರು ಹಂಚಿಕೆ ವಿಷಯದಲ್ಲಿ ರಾಜಿ ಇಲ್ಲ ಅಂದ ಮೇಲೆ ಚರ್ಚಿಸುವುದು ಹೇಗೆ, ರಾಜ್ಯ ಸರ್ಕಾರದ ನಿರ್ಣಯ ದೃಢವಾಗಿದೆ. ಸದ್ಯ ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಪ್ರಕರಣದಲ್ಲಿ ಗೋವಾಕ್ಕೆ ನ್ಯಾಯ ಸಿಗಲಿದೆ ಎಂದು ಗೋವಾ ಸಿಎಂ ಹೇಳಿದ್ದರು.

ಕರ್ನಾಟಕದ ಜತೆ ಗೋವಾಕ್ಕೆ ಮಹದಾಯಿ ವಿಷಯ ದ ಮಾತುಕತೆಗೆ ಗೋವಾ ವಿರೋಧ ಪಕ್ಷಗಳು ಆಕ್ಷೇಪಿಸಿ ದ್ದವು. ಮಹದಾಯಿ ಪ್ರಕರಣ ನ್ಯಾಯಾಲಯದಲ್ಲಿರುವಾಗ ಮುಖ್ಯಮಂತ್ರಿಗಳು ಯಾವುದೇ ಚರ್ಚೆ ನಡೆಸಬಾರದು ಎಂದು ಗೋವಾ ಕಾಂಗ್ರೆಸ್‌ ಮತ್ತು ಎಂಜಿಪಿ ಮುಖ್ಯ ಮಂತ್ರಿ ಸಾವಂತ್‌ ಬಳಿ ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಸಿಎಂ ತಟಸ್ಥ ನೀತಿ ಅನುಸರಿಸಿದ್ದರು.

ಕೇಂದ್ರ ಜಲಶಕ್ತಿ ಸಚಿವರ ಜತೆ ಮಹದಾಯಿ ಚರ್ಚೆ
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನದ ಕುರಿತು ಕೇಂದ್ರ ಜಲಶಕ್ತಿ ಖಾತೆ ಸಚಿವರೊಂದಿಗೆ ಚರ್ಚಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ ನಿವಾರಣೆ ಹಾಗೂ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಮಾತುಕತೆ ಮಾಡು ವಂತೆ ಗೋವಾ ಸಿಎಂ ಪ್ರಮೋದ ಸಾವಂತ ಹಾಗೂ ರಾಜ್ಯದ ಸಿಎಂ ಯಡಿಯೂರಪ್ಪ ಅವರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದೆ.

ಇದಕ್ಕೆ ಗೋವಾ ಸಿಎಂ ಪ್ರಮೋದ ಸಾವಂತ ಒಪ್ಪಿಕೊಂಡಿದ್ದರು. ಆದರೆ ಇದೀಗ ವ್ಯತಿರಿಕ್ತವಾಗಿ ಹೇಳಿಕೆ ನೀಡಿರುವುದು ನೋಡಿದರೆ ಸ್ಥಳೀಯ ರಾಜಕಾರಣ ಇರಬಹುದು ಎನ್ನಿಸುತ್ತಿದೆ ಎಂದರು. ಮಹದಾಯಿ ಯೋಜನೆ ಕುರಿತು ಈಗಾಗಲೇ ನ್ಯಾಯಾಧಿಕರಣ ತೀರ್ಪು ನೀಡಿದೆ. ಅಧಿಸೂಚನೆ ಹೊರಡಿಸುವುದು ಹಾಗೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೂರು ರಾಜ್ಯದ ಮುಖ್ಯಮಂತ್ರಿಗಳನ್ನು ಕರೆದು ಮಾತನಾಡುವ ಕುರಿತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.