ಭ್ರಷ್ಟಾಚಾರಿಗಳಿಗೆ ಕಡಿವಾಣ ಹಾಕೋದಕ್ಕೆ ಈ ಬಜೆಟ್ ಉತ್ತರ:ಪ್ರಧಾನಿ ಮೋದಿ
Team Udayavani, Feb 1, 2017, 2:40 PM IST
ಹೊಸದಿಲ್ಲಿ : ಸಂಸತ್ತಿನಲ್ಲಿ ಇಂದು ಬುಧವಾರ ವಿತ್ತ ಸಚಿವ ಅರುಣ್ ಜೇತ್ಲಿ ಮಂಡಿಸಿರುವ ಬಜೆಟ್ ದೇಶದ ಹಳ್ಳಿಗರು, ರೈತರು ಮತ್ತು ಬಡಜನರ ಕಲ್ಯಾಣಕ್ಕೆ ಮೀಸಲಾಗಿರುವ ಬಜೆಟ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ಈ ಬಜೆಟ್ ನಮ್ಮ ದೇಶದ ಜನಜೀವನದ ಹಲವು ಸ್ತರಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ; ಸಣ್ಣ ಉದ್ದಿಮೆದಾರರಿಗೆ ಜಾಗತಿಕ ಮಾರುಕಟ್ಟೆಗೆ ತಕ್ಕಂತೆ ಸ್ಪರ್ಧಾತ್ಮಕವಾಗಿರುವುದಕ್ಕೆ ನೆರವಾಗುತ್ತದೆ’ ಎಂದು ಮೋದಿ ಬಜೆಟ್ ಅಧಿವೇಶನದ ಬಳಿಕ ದೇಶವನ್ನು ಉದ್ದೇಶಿಸಿ ಮಾಡಿದ ವಿಶೇಷ ಭಾಷಣದಲ್ಲಿ ಹೇಳಿದರು.
“ಭ್ರಷ್ಟಾಚಾರ ಮತ್ತು ಕಪ್ಪು ಹಣವನ್ನು ತೊಡೆದು ಹಾಕುವ ಸರಕಾರದ ಬದ್ಧತೆಯನ್ನು ಈ ಬಜೆಟ್ ಪ್ರತಿಫಲಿಸುತ್ತದೆ. ಅತ್ಯಂತ ಮಹತ್ತರ ಘೋಷಣೆಯಾಗಿ ವಿತ್ತ ಸಚಿವ ಜೇತ್ಲಿ ಅವರು ರಾಜಕೀಯ ಪಕ್ಷಗಳು ಪಡೆಯುವ ನಗದು ದೇಣಿಗೆಯನ್ನು 2,000 ರೂ.ಗಳಿಗೆ ಸೀಮಿತಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳಿಗೆ ನೀಡಲಾಗುವ ದೇಣಿಗೆಯಲ್ಲಿ ಪಾರದರ್ಶಕತೆ ಕಂಡುಬರುವುದಲ್ಲದೆ ಭವಿಷ್ಯದಲ್ಲಿ ಕಾಳ ಧನ ಸೃಷ್ಟಿಯಾಗುವುದನ್ನು ಈ ಕ್ರಮವು ಪರಿಣಾಮಕಾರಿಯಾಗಿ ತಡೆಯಲಿದೆ’ ಎಂದು ಮೋದಿ ಹೇಳಿದರು.
“ಈ ಬಜೆಟ್ ದೇಶದ ಆರ್ಥಿಕತೆಯನ್ನು ಇನ್ನಷ್ಟು ಬಲಿಷ್ಠಗೊಳಿಸಿ ಅದಕ್ಕೆ ಹೊಸ ಅರ್ಥವನ್ನು ನೀಡಲಿದೆ’ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.